ದುಬೈ: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಮಹತ್ವದ ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಎದುರಾಗಿದ್ದು, ಟಾಸ್ ಗೆದ್ದ ಕಿವೀಸ್ ಪಡೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ಆರಂಭಗೊಂಡಿರುವ ಈ ನಿರ್ಣಾಯಕ ಪಂದ್ಯದಲ್ಲಿ ಭಾರತ ಮುಂದಿನ ಹಂತಕ್ಕೇರಲು ಗೆಲುವು ಅನಿವಾರ್ಯವಾಗಿದೆ. ಹೀಗಾಗಿ ಭಾರತಕ್ಕೆ ಇದು ಮಾಡು ಇಲ್ಲವೇ ಮಡಿ ಎಂಬಂತಾಗಿದೆ.
ಟೀಂ ಇಂಡಿಯಾದಲ್ಲಿ 2 ಬದಲಾವಣೆ
ಟೀಂ ಇಂಡಿಯಾದಲ್ಲಿ 2 ಬದಲಾವಣೆಯಾಗಿದ್ದು, ಕೆಳ ಬೆನ್ನು ನೋವಿನಿಂದ ಬಳಲುತ್ತಿರುವ ಸೂರ್ಯಕುಮಾರ್ ಯಾದವ್ ಬದಲಿಗೆ ಇಶಾನ್ ಕಿಶನ್ ಆಡುತ್ತಿದ್ದು, ಇತ್ತ ಬೌಲಿಂಗ್ ವಿಭಾಗದಲ್ಲಿ ಭುವನೇಶ್ವರ್ ಕುಮಾರ್ ಬದಲಿಗೆ ಶಾರ್ದೂಲ್ ಠಾಕೂರ್ ಗೆ ಸ್ಥಾನ ನೀಡಲಾಗಿದೆ.
ತಂಡಗಳು ಇಂತಿದೆ.
ಭಾರತ (ಪ್ಲೇಯಿಂಗ್ XI): ಇಶಾನ್ ಕಿಶನ್, ರೋಹಿತ್ ಶರ್ಮಾ, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ(ನಾಯಕ), ರಿಷಭ್ ಪಂತ್(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ
ನ್ಯೂಜಿಲೆಂಡ್ (ಪ್ಲೇಯಿಂಗ್ XI): ಮಾರ್ಟಿನ್ ಗಪ್ಟಿಲ್, ಡೇರಿಲ್ ಮಿಚೆಲ್, ಕೇನ್ ವಿಲಿಯಮ್ಸನ್ (ನಾಯಕ), ಜೇಮ್ಸ್ ನೀಶಮ್, ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ಆಡಮ್ ಮಿಲ್ನೆ, ಟ್ರೆಂಟ್ ಬೌಲ್ಟ್