HEALTH TIPS

ದೇಶದ ಶೇ 70ರಷ್ಟು ಮಂದಿಗೆ ಕೋವಿಡ್‌ ಲಸಿಕೆ ಪೂರೈಕೆ: ಮಾಂಡವಿಯಾ

             ನವದೆಹಲಿ: ದೇಶದ ಒಟ್ಟು ಜನಸಂಖ್ಯೆಯ ಶೇ 70ರಷ್ಟು ವಯಸ್ಕರಿಗೆ ಮೊದಲ ಡೋಸ್ ಕೋವಿಡ್-19 ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್‌ ಮಾಂಡವಿಯಾ ಹೇಳಿದ್ದಾರೆ.

               ಈ ಕುರಿತು ಟ್ವೀಟ್‌ ಮಾಡಿರುವ ಅವರು, 'ಬಲಿಷ್ಠ ರಾಷ್ಟ್ರ; ಕ್ಷಿಪ್ರ ಲಸಿಕೆ: ಭಾರತದ ಶೇ 70ರಷ್ಟು ಜನರಿಗೆ ಕೋವಿಡ್‌ ಲಸಿಕೆಯ ಮೊದಲ ಡೋಸ್‌ ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ, ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಭಾರತ ಜಾಗತಿಕ ಮಟ್ಟದಲ್ಲಿ ಹೊಸ ದಾಖಲೆ ಬರೆದಿದೆ. ಇದೇ ಉತ್ಸಾಹದಲ್ಲಿ ಸಾಗೋಣ, ಕೊರೊನಾ ವಿರುದ್ಧ ಹೋರಾಡೋಣ' ಎಂದು ಬರೆದಿದ್ದಾರೆ.

           ದೇಶದಲ್ಲಿ ಈವರೆಗೆ 90.79 ಕೋಟಿ ಡೋಸ್‌ ಲಸಿಕೆ ನೀಡಲಾಗಿದೆ. ಲಸಿಕೆ ಪಡೆದವರ ಪೈಕಿ ಶೇ 25ರಷ್ಟು ಮಂದಿಗೆ ಎರಡೂ ಡೋಸ್‌ಗಳನ್ನು ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries