ತಿರುವನಂತಪುರಂ: ರಾಜ್ಯದಲ್ಲಿ ಇಂದು 7427 ಮಂದಿ ಜನರಿಗೆ ಕೋವಿಡ್ ದೃಢಪಟ್ಟಿದೆ. ತಿರುವನಂತಪುರ 1001, ಕೋಝಿಕ್ಕೋಡ್ 997, ಎರ್ನಾಕುಲಂ 862, ತ್ರಿಶೂರ್ 829, ಕೊಲ್ಲಂ 627, ಕೊಟ್ಟಾಯಂ 562, ಪತ್ತನಂತಿಟ್ಟ 430, ಮಲಪ್ಪುರಂ 394, ಪಾಲಕ್ಕಾಡ್ 382, ಕಣ್ಣೂರು 349, ವಯನಾಡ್ 310, ಅಲಪ್ಪುಳ 285, ಇಡುಕ್ಜಿಕಿ 280, ಕಾಸರಗೋಡಿ 119 ಎಂಬಂತೆ ಸೋಂಕು ದೃಢಪಡಿಸಲಾಗಿದೆ.
ಕಳೆದ 24 ಗಂಟೆಗಳಲ್ಲಿ 70,709 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಸಾಪ್ತಾಹಿಕ ಸೋಂಕಿನ ಜನಸಂಖ್ಯೆ ಅನುಪಾತ (WIPR) 10 ಕ್ಕಿಂತ ಹೆಚ್ಚಿನ 77 ಸ್ಥಳೀಯ ಸಂಸ್ಥೆಗಳಲ್ಲಿ 115 ವಾರ್ಡ್ಗಳನ್ನು ಒಳಗೊಂಡಿದೆ. ಇಲ್ಲಿ ಕಟ್ಟುನಿಟ್ಟಿನ ನಿಯಂತ್ರಣ ಇರಲಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರಸ್ತುತ 2,75,185 ಜನರು ನಿಗಾದಲ್ಲಿದ್ದಾರೆ. ಇವರಲ್ಲಿ 2,67,835 ಮಂದಿ ಮನೆ/ ಸಾಂಸ್ಥಿಕ ಕ್ವಾರಂಟೈನ್ನಲ್ಲಿದ್ದಾರೆ ಮತ್ತು 7350 ಮಂದಿ ಆಸ್ಪತ್ರೆಗಳಲ್ಲಿದ್ದಾರೆ. ಒಟ್ಟು 597 ಮಂದಿ ಹೊಸದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪ್ರಸ್ತುತ, 78,624 ಕೋವಿಡ್ ಪ್ರಕರಣಗಳಲ್ಲಿ, ಕೇವಲ 8.2 ಶೇಕಡಾವನ್ನು ಮಾತ್ರ ಆಸ್ಪತ್ರೆಗಳು / ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಕಳೆದ 24 ಗಂಟೆಗಳಲ್ಲಿ ಕೋವಿಡ್ ಬಾಧಿಸಿ 62 ಮಂದಿ ಮೃತಪಟ್ಟಿದ್ದಾರೆ. ಹೆಚ್ಚುವರಿಯಾಗಿ, ಸುಪ್ರೀಂ ಕೋರ್ಟ್ನ ಹೊಸ ಮಾರ್ಗಸೂಚಿಗಳ ಅಡಿಯಲ್ಲಿ ಮೇಲ್ಮನವಿಯಲ್ಲಿ 39 ಸಾವುಗಳು ವರದಿಯಾಗಿವೆ ಮತ್ತು ಜೂನ್ 18 ರವರೆಗೆ 257 ಸಾವುಗಳು ವರದಿಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸಾವಿನ ಸಂಖ್ಯೆ 31,514ಕ್ಕೆ ಏರಿಕೆಯಾಗಿದೆ.
ಇಂದು ಸೋಂಕು ಪತ್ತೆಯಾದವರಲ್ಲಿ 55 ಮಂದಿ ಹೊರ ರಾಜ್ಯದಿಂದ ಬಂದವರು. ಸಂಪರ್ಕದ ಮೂಲಕ 7069 ಮಂದಿ ಜನರು ಸೋಂಕಿಗೆ ಒಳಗಾಗಿದ್ದಾರೆ. 250 ಮಂದಿಯ ಸಂಪರ್ಕ ಮೂಲವು ಸ್ಪಷ್ಟವಾಗಿಲ್ಲ. ಇಂದು 53 ಮಂದಿ ಆರೋಗ್ಯ ಕಾರ್ಯಕರ್ತರಿಗೆ ಸೋಂಕು ದೃಢಪಡಿಸಲಾಗಿದೆ.
ರೋಗನಿರ್ಣಯ ಮತ್ತು ಚಿಕಿತ್ಸೆ ಪಡೆದ 7166 ಮಂದಿ ಜನರು ಗುಣಮುಖರಾಗಿದ್ದಾರೆ. ತಿರುವನಂತಪುರ 747, ಕೊಲ್ಲಂ 1311, ಪತ್ತನಂತಿಟ್ಟ 407, ಆಲಪ್ಪುಳ 374, ಕೊಟ್ಟಾಯಂ 61, ಇಡುಕ್ಕಿ 436, ಎರ್ನಾಕುಳಂ 1323, ತ್ರಿಶೂರ್ 121, ಪಾಲಕ್ಕಾಡ್ 480, ಮಲಪ್ಪುರಂ 503, ಕೋಝಿಕ್ಕೋಡ್ 570, ವಯನಾಡ್ 190, ಕಣ್ಣೂರು 457, ಕಾಸರಗೋಡು 186 ಎಂಬಂತೆ ಗುಣಮುಖರಾಗಿದ್ದಾರೆ. ಇದರೊಂದಿಗೆ 78,624 ಮಂದಿಗೆ ಸೋಂಕು ಪತ್ತೆಯಾಗಿದ್ದು, ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 48,50,742 ಮಂದಿ ಕೋವಿಡ್ನಿಂದ ಮುಕ್ತರಾಗಿದ್ದಾರೆ.