HEALTH TIPS

ಹರಿಯಾಣದಲ್ಲಿ ಭೀಕರ ರಸ್ತೆ ಅಪಘಾತ: ಪುಟ್ಟ ಮಗು ಸೇರಿ ಒಂದೇ ಕುಟುಂಬದ 8 ಮಂದಿ ಸಾವು

        ಜಜ್ಜರ್​​: ಹರಿಯಾಣದ ಜಜ್ಜರ್ ಜಿಲ್ಲೆಯ ಬಹದ್ದೂರ್​ಗಢ್​​ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪುಟ್ಟ ಮಗು ಸೇರಿ ಒಂದೇ ಕುಟುಂಬದ 8 ಮಂದಿ ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ.

        ಕೆಎಂಪಿ ಎಕ್ಸ್‌ಪ್ರೆಸ್‌ವೇ ಹೆದ್ದಾರಿಯಲ್ಲಿ ವೇಗವಾಗಿ ಬರುತ್ತಿದ್ದ ಕಾರೊಂದು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ.

        ಉತ್ತರ ಪ್ರದೇಶದ ಕಡೆ ಪ್ರಯಾಣ ಬೆಳೆಸುತ್ತಿದ್ದ ಕಾರೊಂದರಲ್ಲಿ ಒಟ್ಟು 11 ಮಂದಿ ಇದ್ದು, 8 ಮಂದಿ ಬಲಿಯಾಗಿದ್ದಾರೆ.

       ಸ್ಥಳಕ್ಕೆ ಬಹದ್ದೂರ್​ಗಢ್ ಪೊಲೀಸರು ಭೇಟಿ ನೀಡಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮತ್ತೊಂದು ಮಗು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

       ಮೃತರ ಗುರುತು ಪತ್ತೆ ಹಚ್ಚಲಾಗಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries