HEALTH TIPS

ಭಾರತದ 'ಮಿಸೈಲ್​ ಮ್ಯಾನ್' ಎಪಿಜೆ ಅಬ್ದುಲ್‌ ಕಲಾಂ 90ನೇ ಜಯಂತಿ: ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿ ಸ್ಮರಣೆ

              ನವದೆಹಲಿ: ಇಂದು ಭಾರತ ರತ್ನ, ಜನಸಾಮಾನ್ಯರ ನೆಚ್ಚಿನ ರಾಷ್ಟ್ರಪತಿ, ಅಂತರಿಕ್ಷಯಾನ ಇಂಜಿನಿಯರ್, ವಿಜ್ಞಾನಿ, ಉಪನ್ಯಾಸಕ, ಯುವಕರ ಸ್ಫೂರ್ತಿ ಡಾ.ಎಪಿಜೆ ಅಬ್ದುಲ್ ಕಲಾಂ ಅವರ 90ನೇ ಜನ್ಮದಿನಾಚರಣೆಯಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಅಬ್ದುಲ್ ಕಲಾಂ ಅವರನ್ನು ಸ್ಮರಿಸಿದ್ದಾರೆ.

           ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ಭಾರತವನ್ನು ಬಲಿಷ್ಠ, ಸಮೃದ್ಧ ಮತ್ತು ಸಮರ್ಥವಾಗಿ ಕಟ್ಟಲು ಅಬ್ದುಲ್ ಕಲಾಂ ತಮ್ಮ ಜೀವನವನ್ನು ಅರ್ಪಿಸಿದರು. ಅವರು ದೇಶವಾಸಿಗಳಿಗೆ ಯಾವಾಗಲೂ ಸ್ಫೂರ್ತಿಯಾಗಿ ಉಳಿಯುತ್ತಾರೆ ಸ್ಮರಿಸಿದ್ದಾರೆ.

                                       ರಾಷ್ಟ್ರಪತಿ ರಾಮನಾಥ ಕೋವಿಂದ್ ಗೌರವ:
            ರಾಷ್ಟ್ರಪತಿ ರಾಮನಾಥ ಕೋವಿಂದ್ ಜಮ್ಮು ಮತ್ತು ಕಾಶ್ಮೀರ ಪ್ರವಾಸದಲ್ಲಿದ್ದು, ಉಧಂಪುರದಲ್ಲಿ ಕಲಾಂ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

            ಮಕ್ಕಳ ನೆಚ್ಚಿನ ಮೇಷ್ಟರಾಗಿ, ಜನರ ಮಚ್ಚಿನ ರಾಷ್ಟ್ರಪತಿಯಾಗಿ, ಭಾರತದ ಪ್ರಮುಖ ಕ್ಷಿಪಣಿಯನ್ನು ಅಭಿವೃದ್ಧಿಪಡಿಸಿದ ವಿಜ್ಞಾನಿಯಾಗಿ ದಿವಂಗತ ಮಾಜಿ ರಾಷ್ಟ್ರಪತಿ ಡಾ ಎ ಪಿ ಜೆ ಅಬ್ದುಲ್ ಕಲಾಂ ಹಲವು ಸ್ತರಗಳಲ್ಲಿ, ವಿವಿಧ ಕ್ಷೇತ್ರಗಳಲ್ಲಿ ದೇಶದ ಬೆಳವಣಿಗೆಗೆ ಕೊಡುಗೆ ನೀಡಿದವರಾಗಿದ್ದಾರೆ. ಬಾಹ್ಯಾಕಾಶ ವಿಜ್ಞಾನಿಯಾಗಿ ಅಬ್ದುಲ್ ಕಲಾಂ ಭಾರತದ ಎರಡು ಪ್ರಮುಖ ಅಂತರಿಕ್ಷ ಸಂಶೋಧನಾ ಸಂಸ್ಥೆಗಳಾದ ಡಿಆರ್ ಡಿಒ ಮತ್ತು ಇಸ್ರೊದಲ್ಲಿ ಕೆಲಸ ಮಾಡಿದ್ದರು. ಸ್ವದೇಶಿ ನಿರ್ಮಿತ ಕ್ಷಿಪಣಿ ಅಗ್ನಿ ಮತ್ತು ಪೃಥ್ವಿಗಳ ಅಭಿವೃದ್ಧಿ ಮತ್ತು ಕಾರ್ಯನಿರ್ವಹಣೆಯಿಂದ ಭಾರತದ ಕ್ಷಿಪಣಿ ಮನುಷ್ಯ ಎಂಬ ಬಿರುದು ಪಡೆದಿದ್ದು ಮಾತ್ರವಲ್ಲದೆ ಭಾರತದ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಹಲವು ವಿಷಯಗಳಲ್ಲಿ ಕಲಾಂ ಕೊಡುಗೆ ನೀಡಿದ್ದಾರೆ.

             ಅವುಲ್ ಪಕೀರ್ ಜೈನುಲಾಬ್ದೀನ್ ಅಬ್ದುಲ್ ಕಲಾಂ ಅವರು ಅಕ್ಟೋಬರ್ 15, 1931 ರಂದು ತಮಿಳುನಾಡಿನ ರಾಮೇಶ್ವರಂನಲ್ಲಿ ತಮಿಳು ಮುಸ್ಲಿಂ ಕುಟುಂಬದಲ್ಲಿ ಜನಿಸಿದರು. ವಿದ್ಯಾರ್ಥಿಯಾಗಿ ಅವರ ಜೀವನವು ಸಾಕಷ್ಟು ಕಷ್ಟ ಮತ್ತು ಹೋರಾಟಗಳಿಂದ ಕೂಡಿತ್ತು. 1998 ರಲ್ಲಿ ಪೋಖ್ರನ್-2 ನ್ಯೂಕ್ಲಿಯರ್ ಪರೀಕ್ಷೆಯಲ್ಲಿ ತಾಂತ್ರಿಕವಾಗಿ, ರಾಜಕೀಯವಾಗಿ ಪ್ರಧಾನ ಪಾತ್ರವನ್ನು ಕಲಾಂ ವಹಿಸಿದ್ದರು. ರಾಷ್ಟ್ರಪತಿ ಆಗುವುದಕ್ಕೂ ಮುನ್ನ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿ.ಆರ್.ಡಿ.ಓ) ಮತ್ತು ಭಾರತೀಯ ಬಾಹ್ಯಾಕಾಶ ಸಂಶೋಧನೆ ಸಂಸ್ಥೆ (ಇಸ್ರೋ)ದಲ್ಲಿ ವೈಮಾನಿಕ ಇಂಜಿನಿಯರ್ ಆಗಿ ಸೇವೆ ಸಲ್ಲಿಸಿದ್ದರು.

             ಅಬ್ದುಲ್ ಕಲಾಂ ಜುಲೈ 27, 2015 ರಂದು ಶಿಲ್ಲಾಂಗ್​ನಲ್ಲಿ ಉಪನ್ಯಾಸ ನೀಡುವ ಸಂದರ್ಭದಲ್ಲಿ ಹೃದಯಾಘಾತ ಸಂಭವಿಸಿ ಕುಸಿದುಬಿದ್ದರು. ನಂತರ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries