ತಿರುವನಂತಪುರಂ: ರಾಜ್ಯದಲ್ಲಿ ಇಂದು 9470 ಮಂದಿ ಜನರಿಗೆ ಕೋವಿಡ್ ದೃಢಪಟ್ಟಿದೆ. ಎರ್ನಾಕುಳಂ 1337, ತಿರುವನಂತಪುರ 1261, ತ್ರಿಶೂರ್ 930, ಕೋಝಿಕ್ಕೋಡ್ 921, ಕೊಲ್ಲಂ 696, ಮಲಪ್ಪುರಂ 660, ಪಾಲಕ್ಕಾಡ್ 631, ಕೊಟ್ಟಾಯಂ 569, ಕಣ್ಣೂರು 561, ಇಡುಕ್ಕಿ 522, ಪತ್ತನಂತಿಟ್ಟ 447, ಆಲಪ್ಪುಳ 432, ವಯನಾಡ್ 318 ಮತ್ತು ಕಾಸರಗೋಡು 185 ಎಂಬಂತೆ ಸೋಂಕು ದೃಢಪಟ್ಟಿದೆ.
ಕಳೆದ 24 ಗಂಟೆಗಳಲ್ಲಿ 88,310 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಸಾಪ್ತಾಹಿಕ ಸೋಂಕು ಜನಸಂಖ್ಯೆ ಅನುಪಾತ 10 ಕ್ಕಿಂತ ಹೆಚ್ಚಿನ 227 ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ 332 ವಾರ್ಡ್‍ಗಳಿವೆ. ಇಲ್ಲಿ ಕಠಿಣ ನಿಯಂತ್ರಣ ಇರುತ್ತದೆ.
ಪ್ರಸ್ತುತ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಂದಿ 3,66,250 ಜನರು ಕಣ್ಗಾವಲಿನಲ್ಲಿ ಇದ್ದಾರೆ. ಈ ಪೈಕಿ 3,52,851 ಮಂದಿ ಮನೆ / ಸಾಂಸ್ಥಿಕ ಕ್ವಾರಂಟೈನ್ ಮತ್ತು 13,399 ಮಂದಿ ಆಸ್ಪತ್ರೆಗಳಲ್ಲಿದ್ದಾರೆ. ಒಟ್ಟು 927 ಮಂದಿ ಜನರನ್ನು ಹೊಸದಾಗಿ ಆಸ್ಪತ್ರೆಗೆ ಸೇರಿಸಲಾಗಿದೆ.
ಪ್ರಸ್ತುತ, 1,13,132 ಕೋವಿಡ್ ಪ್ರಕರಣಗಳಲ್ಲಿ, ಶೇಕಡಾ 10.4 ರಷ್ಟು ಜನರು ಮಾತ್ರ ಆಸ್ಪತ್ರೆಗಳು / ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.
ಕೋವಿಡ್ ಬಾಧಿಸಿ ಕಳೆದ 24 ಗಂಟೆಗಳಲ್ಲಿ 101 ಮಂದಿ ಮೃತಪಟ್ಟಿದ್ದಾರೆ. ಒಟ್ಟು ಸಾವಿನ ಸಂಖ್ಯೆ 26,173 ಕ್ಕೆ ಏರಿಕೆಯಾಗಿದೆ.
ಇಂದು ಸೋಂಕು ಪತ್ತೆಯಾದವರಲ್ಲಿ 54 ಮಂದಿ ರಾಜ್ಯದ ಹೊರಗಿಂದ ಬಂದವರು. 8971 ಮಂದಿ ಜನರು ಸಂಪರ್ಕದ ಮೂಲಕ ಸೋಂಕಿಗೆ ಒಳಗಾಗಿದ್ದಾರೆ. 397 ಮಂದಿಯ ಸಂಪರ್ಕ ಮೂಲ ಸ್ಪಷ್ಟವಾಗಿಲ್ಲ. ಇಂದು 48 ಮಂದಿ ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್ ದೃಢಪಡಿಸಲಾಗಿದೆ.
ರೋಗನಿರ್ಣಯ ಮತ್ತು ಚಿಕಿತ್ಸೆ ಪಡೆದ ಒಟ್ಟು 12,881 ಮಂದಿ ಜನರು ಗುಣಮುಖರಾಗಿದ್ದಾರೆ. ತಿರುವನಂತಪುರ 2241, ಕೊಲ್ಲಂ 863, ಪತ್ತನಂತಿಟ್ಟ 521, ಅಲಪ್ಪುಳ 725, ಕೊಟ್ಟಾಯಂ 867, ಇಡುಕ್ಕಿ 586, ಎರ್ನಾಕುಳಂ 1318, ತ್ರಿಶೂರ್ 1421, ಪಾಲಕ್ಕಾಡ್ 662, ಮಲಪ್ಪುರಂ 1045, ಕೋಝಿಕ್ಕೋಡ್ 1333, ವಯನಾಡ್ 378, ಕಣ್ಣೂರು 753 ಮತ್ತು ಕಾಸರಗೋಡು 168 ಎಂಬಂತೆ ಗುಣಮುಖರಾಗಿದ್ದಾರೆ. ಇದರೊಂದಿಗೆ, 1,13,132 ಮಂದಿ ಜನರಿಗೆ ಕೋವಿಡ್ ಬಾಧಿಸಿದ್ದು, ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. 46,44,211 ಮಂದಿ ಇಲ್ಲಿಯವರೆಗೆ ಕೋವಿಡ್‍ನಿಂದ ಮುಕ್ತರಾಗಿದ್ದಾರೆ.