ನವದೆಹಲಿ: ಭಾರತದಲ್ಲಿನ ಕೊರೊನಾವೈರಸ್ ಪರೀಕ್ಷೆಗಳ ಸಂಖ್ಯೆ ಹೆಚ್ಚಿಸಿದಂತೆ ಹೊಸ ಪ್ರಕರಣಗಳ ಸಂಖ್ಯೆಯೂ ಏರಿಕೆಯಾಗುತ್ತಿದೆ. ಕೊವಿಡ್-19 ಸೋಂಕಿನ ಪರೀಕ್ಷೆ ಪ್ರಮಾಣ 13 ಲಕ್ಷದ ಆಸುಪಾಸಿನಲ್ಲಿದ್ದ ಸಂದರ್ಭದಲ್ಲಿ ದೇಶದಲ್ಲಿ ಕೇವಲ 20,000ಕ್ಕಿಂತ ಕಡಿಮೆ ಸೋಂಕಿತ ಪ್ರಕರಣಗಳು ವರದಿಯಾಗುತ್ತಿದ್ದವು.
ದೇಶದಲ್ಲಿ ಕಳೆದ ಎರಡ್ಮೂರು ದಿನಗಳಿಂದ ಕೊವಿಡ್-19 ಹೊಸ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದ್ದು ಕೊಂಚ ನಿರಾಳತೆಯನ್ನು ಮೂಡಿಸಿತ್ತು. ಆದರೆ ಅದರ ಹಿಂದೆ ಸೋಂಕಿನ ಪರೀಕ್ಷೆ ಪ್ರಮಾಣ ಕಡಿಮೆ ಆಗಿರುವುದೇ ಮುಖ್ಯ ಕಾರಣ ಎಂಬುದನ್ನು ಗುರುವಾರದ ಅಂಕಿ ಅಂಶಗಳು ಸ್ಪಷ್ಟವಾಗಿ ಹೇಳುತ್ತಿವೆ.
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ15,06,254 ಜನರ ಮಾದರಿಯನ್ನು ಕೊವಿಡ್-19 ಸೋಂಕಿನ ಪರೀಕ್ಷೆಗೆ ಒಳಪಡಿಸಲಾಗಿದೆ. ಅದೇ ಬುಧವಾರ 15,04,713 ಜನರಿಗೆ ಕೊವಿಡ್-19 ವೈದ್ಯಕೀಯ ಪರೀಕ್ಷೆ ನಡೆಸಲಾಗಿತ್ತು. ತಪಾಸಣೆ ಪ್ರಮಾಣದಲ್ಲಿ ಕೇವಲ 1,541 ವ್ಯತ್ಯಾಸವಾಗಿದೆ. ಆದರೆ ಹೊಸ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ 4,659ರಷ್ಟು ಹೆಚ್ಚಾಗಿದೆ. ದೇಶದಲ್ಲಿ ಈವರೆಗೂ 56,89,56,439 ಜನರಿಗೆ ಕೊರೊನಾವೈರಸ್ ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.
ದೇಶದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 23,529 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 311 ಮಂದಿ ಮಹಾಮಾರಿಗೆ ಬಲಿಯಾಗಿದ್ದರೆ, 28,718 ಸೋಂಕಿತರು ಗುಣಮುಖರಾಗಿದ್ದಾರೆ. ಗುರುವಾರದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಕೊರೊನಾವೈರಸ್ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 3,37,39,980ಕ್ಕೆ ಏರಿಕೆಯಾಗಿದೆ. ಇದುವರೆಗೂ 3,30,14,898 ಸೋಂಕಿತರು ಗುಣಮುಖರಾಗಿದ್ದು, 4,48,062 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರ ಹೊರತಾಗಿ ದೇಶದಲ್ಲಿ 2,77,020 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಭಾರತದಲ್ಲಿ ಒಂದೇ ದಿನ 23,529 ಮಂದಿಗೆ ಕೊವಿಡ್-19 ಸೋಂಕು ತಗುಲಿದ್ದು, ಈ ಪೈಕಿ ಕೇರಳ ರಾಜ್ಯವೊಂದರಲ್ಲೇ 12,161 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ದೇಶದಲ್ಲಿ 311 ಸಾವಿನ ಪ್ರಕರಣ ವರದಿಯಾಗಿದ್ದರೆ, ಅದರಲ್ಲಿ 155 ಸಾವಿನ ಪ್ರಕರಣಗಳು ಕೇರಳದಲ್ಲಿ ವರದಿಯಾಗಿವೆ.
88.34 ಕೋಟಿ ಮಂದಿಗೆ ಕೊರೊನಾವೈರಸ್ ಲಸಿಕೆ ವಿತರಣೆ
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಭೀತಿಯಲ್ಲಿ ಲಸಿಕೆ ವಿತರಣೆ ಅಭಿಯಾನವನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ದೇಶದಲ್ಲಿ 88.34 ಕೋಟಿಗೂ ಅಧಿಕ ಮಂದಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ. ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 257 ದಿನಗಳಾಗಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 65,34,306 ಮಂದಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದ್ದು, ಈವರೆಗೂ 88,34,70,578 ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ. ಕೇಂದ್ರ ಸರ್ಕಾರದಿಂದ ದೇಶದ ವಿವಿಧ ರಾಜ್ಯ ಮತ್ತು ಕೇಂದ್ರಾಡಲಿತ ಪ್ರದೇಶಗಳಿಗೆ ಈವರೆಗೂ 86,51,52,695 ಡೋಸ್ ಲಸಿಕೆ ಪೂರೈಕೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಕೊವಿಡ್-19 ಲಸಿಕೆ ವಿತರಣೆಯ ಅಂಕಿ-ಅಂಶ
ಕೊರೊನಾವೈರಸ್ ಎರಡನೇ ಅಲೆಯಲ್ಲಿ ಅತಿಹೆಚ್ಚು ಸೋಂಕು ತಗುಲಿರುವುದು ಹಾಗೂ ಸಾವಿನ ಸಂಖ್ಯೆಯಲ್ಲಿ ಅತಿಹೆಚ್ಚು ಮಧ್ಯವಯಸ್ಕರ ಸಂಖ್ಯೆಯೇ ಹೆಚ್ಚಾಗಿದೆ. 1,03,72,430 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 88,80,241 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,83,51,843 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 1,49,67,447 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.
ಭಾರತದಲ್ಲಿ ಸೆಪ್ಟೆಂಬರ್ 29ರ ಅಂಕಿ-ಅಂಶಗಳ ಪ್ರಕಾರ, 45 ರಿಂದ 59 ವಯೋಮಾನದ 15,88,17,060 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 7,61,53,326 ಜನರಿಗೆ ಎರಡನೇ ಡೋಸ್ ಲಸಿಕೆ ವಿತರಿಸಲಾಗಿದೆ. ಅದೇ ರೀತಿ 60 ವರ್ಷ ಮೇಲ್ಪಟ್ಟ 10,09,75,993 ಜನರಿಗೆ ಕೊವಿಡ್-19 ಲಸಿಕೆಯ ಮೊದಲ ಡೋಸ್ ಹಾಗೂ 5,58,62,760 ಫಲಾನುಭವಿಗಳಿಗೆ ಲಸಿಕೆಯ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ. 18 ವರ್ಷ ಮೇಲ್ಪಟ್ಟ 35,75,96,583 ಮಂದಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 8,09,03,869 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ವಿತರಿಸಲಾಗಿದೆ.
ದೇಶದಲ್ಲಿ ಈವರೆಗೂ 64,61,13,909 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 23,67,67,643 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಕೇಂದ್ರ ಸರ್ಕಾರ ಪೂರೈಸಿರುವ ಕೊರೊನಾವೈರಸ್ ಲಸಿಕೆ
2021ರ ಸಪ್ಟೆಂಬರ್ 30ರ ಅಂಕಿ-ಅಂಶಗಳ ಪ್ರಕಾರ, 86,51,52,695 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಈ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವ ಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.
* ಪೂರೈಕೆಯಾದ ಲಸಿಕೆ ಪ್ರಮಾಣ - 86,51,52,695
* ಸದ್ಯ ಬರಬೇಕಾಗಿರುವ ಲಸಿಕೆ ಪ್ರಮಾಣ - 63,69,890
* ಕೊವಿಡ್-19 ಲಸಿಕೆಯ ಲಭ್ಯತೆ - 5,00,46,000