HEALTH TIPS

ಶತಕೋಟಿ ಕೋವಿಡ್ ಲಸಿಕೆ ಪೂರೈಕೆ, ಭಾರತದ ಇತಿಹಾಸದಲ್ಲಿ ಹೊಸ ಅಧ್ಯಾಯ: ಪ್ರಧಾನಿ ನರೇಂದ್ರ ಮೋದಿ

       ನವದೆಹಲಿ: ನಮ್ಮ ದೇಶ ಕರ್ತವ್ಯವನ್ನು ಪಾಲಿಸಿದ್ದು ಅದರಲ್ಲಿ ಯಶಸ್ಸು ಸಿಕ್ಕಿದೆ. ಅಕ್ಟೋಬರ್ 21ಕ್ಕೆ ದೇಶದಲ್ಲಿ ಶತಕೋಟಿ ಕೋವಿಡ್-19 ಲಸಿಕೆಯನ್ನು ನೀಡಲಾಗಿದೆ. ಈ ಸಂದರ್ಭದಲ್ಲಿ ನಾನು ಎಲ್ಲ ಆರೋಗ್ಯ ಸಮುದಾಯದ ಕಾರ್ಯಕರ್ತರು, ವೈದ್ಯರು, ದೇಶದ ನಾಗರಿಕರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶವಾಸಿಗಳನ್ನುದ್ದೇಶಿಸಿ ಹೇಳಿದ್ದಾರೆ. 

      ಇಂದು ದೇಶದ ನಾಗರಿಕರನ್ನು ಉದ್ದೇಶಿಸಿ ಮಾತನಾಡಿದ ಅವರು ದೇಶ 100 ಕೋಟಿ ಲಸಿಕೆ ಗುರಿಯನ್ನು ಸಾಧಿಸಿದ ಸಂತೋಷವನ್ನು ಹಂಚಿಕೊಂಡರು. ಇದು ಎಲ್ಲರ ಸಾಧನೆ, ಹೃದಯಪೂರ್ವಕವಾಗಿ ಪ್ರತಿಯೊಬ್ಬರಿಗೂ ಧನ್ಯವಾದ ಹೇಳುತ್ತೇನೆ. ವ್ಯಾಕ್ಸಿನೇಷನ್ ನಲ್ಲಿ ಭಾರತ ಜಗತ್ತಿನಲ್ಲಿಯೇ 2ನೇ ಸ್ಥಾನದಲ್ಲಿದೆ. ಲಸಿಕೆ ನೀಡಿಕೆಯಲ್ಲಿ ಇಂದು ಭಾರತ ಜಗತ್ತಿಗೆ ಮಾದರಿಯಾಗಿದೆ ಎಂದರು.

      ಕೊರೋನಾ ಮೊದಲ ಅಲೆ ಕಂಡುಬಂದ ಸಂದರ್ಭದಲ್ಲಿ ದೇಶದ ಪರಿಸ್ಥಿತಿ ಅತ್ಯಂತ ಕಠಿಣವಾಗಿತ್ತು. ಸೋಂಕನ್ನು ಎದುರಿಸುವುದು ಹೇಗೆ, ಏನು ಮಾಡುವುದು ಎಂದು ಗೊತ್ತಿರಲಿಲ್ಲ. ಸಮಯ ಕಳೆದಂತೆ ಪರಿಸ್ಥಿತಿಗೆ ಹೊಂದಿಕೊಂಡೆವು. ಸೋಂಕನ್ನು ಸಮರ್ಥವಾಗಿ ನಾವು ಭಾರತೀಯರು ಎದುರಿಸಿದ್ದೇವೆ, ಕಳೆದ ಜನವರಿಯಲ್ಲಿ ಕೊರೋನಾ ಲಸಿಕೆ ಬಂದ ಮೇಲೆ 9 ತಿಂಗಳಲ್ಲಿ ಸಾಧನೆ ಮಾಡಿದ್ದೇವೆ. ಸವಾಲನ್ನು ಸಮರ್ಥವಾಗಿ ಎದುರಿಸಿದ್ದೇವೆ. ಅದರ ಪರಿಣಾಮವೇ ಇಂದು ಶತಕೋಟಿ ಲಸಿಕೆ, ನಮ್ಮ ದೇಶದ ಸಾಮರ್ಥ್ಯದ ಪ್ರತಿಬಿಂಬವಾಗಿದೆ ಎಂದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries