ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅಂತಿಮ ವಿಧಿವಿಧಾನ ಕಾರ್ಯವನ್ನು ಪುನೀತ್ ಅಣ್ಣ ರಾಘವೇಂದ್ರ ರಾಜ್ ಕುಮಾರ್ ಪುತ್ರ ವಿನಯ್ ರಾಜ್ ಕುಮಾರ್ ಅಂತಿಮ ಕಾರ್ಯ ಮಾಡಲಿದ್ದಾರೆ.
ರಾಜ್ ಕುಮಾರ್ ಕುಟುಂಬ ಸದಸ್ಯರು ಈ ಬಗ್ಗೆ ತೀರ್ಮಾನ ತೆಗೆದುಕೊಂಡಿದ್ದು, ಸಕಲ ಸಿದ್ಧತೆ ನಡೆಸುತ್ತಿದ್ದಾರೆ. ಪುನೀತ್ ರಾಜ್ ಕುಮಾರ್ ಅವರಿಗೆ ಇಬ್ಬರೂ ಹೆಣ್ಣು ಮಕ್ಕಳಿರುವುದರಿಂದ ಪುನೀತ್ ಅಣ್ಣ ರಾಘವೇಂದ್ರ ಅವರ ಪುತ್ರನಿಂದ ಕಾರ್ಯ ನೆರವೇರಿಸಲು ನಿರ್ಧರಿಸಲಾಗಿದೆ.
ಕಂಠೀರವ ಸ್ಟೂಡಿಯೋದಲ್ಲಿ ನಡೆಯಲಿರುವ ಅಪ್ಪು ಅಂತ್ಯಸಂಸ್ಕಾರಕ್ಕೆ ಸಕಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಡಾ. ರಾಜ್ ಕುಮಾರ್ ಸಮಾಧಿಯಿಂದ 125 ಅಡಿ ಹಾಗೂ ಪಾರ್ವತಮ್ಮ ಸಮಾಧಿಯಿಂದ 45 ಅಡಿ ದೂರದಲ್ಲಿ ಅಪ್ಪು ಅಂತ್ಯಸಂಸ್ಕಾರಕ್ಕೆ ವ್ಯವಸ್ಥೆ ಮಾಡಲಾಗಿದೆ.
ಪುನೀತ್ ಪುತ್ರಿ ಧೃತಿ ನ್ಯೂಯಾರ್ಕ್ ನಿಂದ ಹೊರಟಿದ್ದು ಸಂಜೆ 4. 30 ವೇಳೆಗೆ ಬೆಂಗಳೂರು ತಲುಪಲಿದ್ದಾರೆ, ಅಲ್ಲಿಯವರೆಗೂ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಪೂಜೆ ನೆರವೇರಿಸಲಾಗುತ್ತದೆ. ಪುತ್ರಿ ಆಗಮನದ ಬಳಿಕ ಅಂತಿಮ ಕಾರ್ಯ ನೆರವೇರಲಿದೆ.