ಬದಿಯಡ್ಕ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜನ್ಮ ದಿನದ ಅಂಗವಾಗಿ ಕಾಸರಗೋಡು ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ,ಸೇವಾ ಸಮರ್ಪಣ ಅಭಿಯಾನ ಕಾರ್ಯಕ್ರಮದ ಅಂಗವಾಗಿ ಪೋಸ್ಟ್ ಕಾರ್ಡ್ ಅಭಿಯಾನ ಕಾರ್ಯಕ್ರಮ ಬದಿಯಡ್ಕ ಮಂಡಲ ಕಚೇರಿಯಲ್ಲಿ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಮಹಿಳಾ ಮೋರ್ಚಾದ ಜಿಲ್ಲಾ ಅಧ್ಯಕ್ಷೆ ಪುಷ್ಪ ಗೋಪಾಲನ್ ಅವರು ಅಧ್ಯಕ್ಷತೆ ವಹಿಸಿದ್ದರು. ದೇಶೀಯ ಕೌನ್ಸಿಲರ್ ಪ್ರಮೀಳಾ ಸಿ ನಾಯ್ಕ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಜಿಲ್ಲಾ ಪಂಚಾಯತಿ ಸದಸ್ಯೆ ಶೈಲಜ ಭಟ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಧಾಮ ಗೋಸಾಡ, ಮಂಡಲ ಕಾರ್ಯದಶಿಗಳಾದ ಪಿ ಅರ್ ಸುನಿಲ್, ಸುಕುಮಾರ ಕುದ್ರೆಪ್ಪಡಿ ಉಪಸ್ಥಿತರಿದ್ದರು. ಜಿಲ್ಲಾ ಮಹಿಳಾ ಮೋರ್ಚಾದ ಪ್ರದಾನ ಕಾರ್ಯದರ್ಶಿ ಅಶ್ವಿನಿ ಸ್ವಾಗತಿಸಿ, ಬ್ಲಾಕ್ ಪಂಚಾಯತಿ ಸದಸ್ಯೆ ಜಯಂತಿ ವಂದಿಸಿದರು.