ತಿರುವನಂತಪುರಂ: ಶಾಲೆಗಳಲ್ಲಿ ಲೈಂಗಿಕ ಶಿಕ್ಷಣ ನೀಡಬೇಕು ಎಂದು ರಾಜ್ಯ ಮಹಿಳಾ ಆಯೋಗದ ನೂತನ ಅಧ್ಯಕ್ಷೆ ನ್ಯಾಯವಾದಿ ಪಿ.ಸತಿ ದೇವಿ ಹೇಳಿರುವÀರು. ಪಾಲಿಯಲ್ಲಿ ತನ್ನ ಗೆಳೆಯನಿಂದ ಕತ್ತುಹಿಸುಕಿಸಲ್ಪಟ್ಟು ಕೊಲೆಯಾದ ನಿತಿನಾಳ ಮನೆಗೆ ಭೇಟಿ ನೀಡಿದ ಬಳಿಕ ಸತೀ ದೇವಿ ಪ್ರತಿಕ್ರಿಯೆ ನೀಡಿದರು. ಇಂದಿನ ಸಮಾಜದಲ್ಲಿ ಲೈಂಗಿಕ ಶಿಕ್ಷಣ ಅತ್ಯಗತ್ಯ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.
ಇಂದು 10- ಮತ್ತು 12 ವರ್ಷದ ಮಕ್ಕಳು ಪ್ರೀತಿಯ ಬಲೆಯಲ್ಲಿ ಬೀಳುತ್ತಿದ್ದಾರೆ. ಸಾಮಾಜಿಕ ಮಾಧ್ಯಮದ ಬಗ್ಗೆ ಮಕ್ಕಳಲ್ಲಿ ತಪ್ಪು ಕಲ್ಪನೆಗಳಿವೆ. ವಿದ್ಯಾರ್ಥಿಗಳಿಗೆ ಪಠ್ಯಕ್ರಮದ ಮೂಲಕ ಅರಿವು ಮೂಡಿಸಬೇಕು ಎಂದು ಸತಿದೇವಿ ಹೇಳಿದರು.
ವಿದ್ಯಾವಂತ ಯುವಜನರು ಲಿಂಗ ನ್ಯಾಯದ ಬಗ್ಗೆ ಕಡಿಮೆ ಅರಿವು ಹೊಂದಿರುವುದು ಅರ್ಥವಾಗುವಂತಹದ್ದಾಗಿದೆ. ವಿದ್ಯಾರ್ಥಿಗಳಿಗೆ ಲೈಂಗಿಕ ಶಿಕ್ಷಣವನ್ನು ನೀಡುವುದು ಇದನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ. ಶಿಕ್ಷಣ ಕ್ಷೇತ್ರದಲ್ಲಿ ಲಿಂಗ ಸಮಾನತೆಯ ಬಗ್ಗೆ ಜಾಗೃತಿ ಮೂಡಿಸಲು ಉನ್ನತ ಶಿಕ್ಷಣ ಇಲಾಖೆಯು ಕಾಲೇಜುಗಳಲ್ಲಿ ಯೋಜನೆಗಳನ್ನು ಜಾರಿಗೊಳಿಸಬೇಕು ಎಂದು ಸತೀ ದೇವಿ ಆಗ್ರಹಿಸಿದರು. ಪ್ರಕರಣವನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದು ಸತೀ ದೇವಿ ಹೇಳಿದರು.