ಬದಿಯಡ್ಕ: ಏತಡ್ಕದ ಕುಂಬ್ಡಾಜೆ ಗ್ರಾಮ ಸೇವಾ ಸಂಘ ಗ್ರಂಥಾಲಯದ ಆಶ್ರಯದಲ್ಲಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು. ಪ್ರಗತಿಪರ ಕೃಷಿಕ ಡಾ. ಪ್ರಕಾಶ್ ವೈ.ಎಚ್ ಏತಡ್ಕ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಅವರು ಗಾಂಧೀಜಿಯವರ ಕೊಡುಗೆಗಳನ್ನು ಸ್ಮರಿಸಿ ಮಾತನಾಡಿದರು.ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರನ್ನೂ ಸ್ಮರಿಸಿದರು.
ಅಧ್ಯಕ್ಷತೆ ವಹಿಸಿದ್ದ ಗ್ರಂಥಾಲಯದ ಅಧ್ಯಕ್ಷ ಕೆ.ನರಸಿಂಹ ಭಟ್ ಅವರು ಗಾಂಧೀಜಿಯವರ ಬಗ್ಗೆ ಸ್ವರಚಿತ ಚುಟುಕ ಮತ್ತು ಮುಕ್ತಕಗಳನ್ನು ವಾಚಿಸಿದರು. ಕಾರ್ಯದರ್ಶಿ ಡಾ.ವೇಣುಗೋಪಾಲ್ ಕೆ ಸ್ವಾಗತಿಸಿದರು. ವೈ.ವಿ ಸುಬ್ರಹ್ಮಣ್ಯ ವಂದಿಸಿದರು. ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನಡೆಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.