ಮುಂಬೈ: ದೇಶಾದ್ಯಂತ ಮತ್ತೆ ತೈಲೋತ್ಪನ್ನಗಳ ದರ ಏರಿಕೆಯಾಗಿದ್ದು, ಶುಕ್ರವಾರ ಪೆಟ್ರೋಲಿಯಂ ಉತ್ಪನ್ನಗಳು ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ತಲುಪಿವೆ.
ದೇಶದಲ್ಲಿ ಶುಕ್ರವಾರ ಪೆಟ್ರೋಲ್, ಡೀಸೆಲ್ ಬೆಲೆ ಪ್ರತಿ ಲೀಟರ್ ಮೇಲೆ ಸರಾಸರಿ 25 ರಿಂದ 30 ಪೈಸೆ ಹೆಚ್ಚಳವಾಗಿ ಜನರ ಜೇಬು ಸುಡುತ್ತಿದೆ. ಕಳೆದ ಸೆ.5ರಂದು ಪೆಟ್ರೋಲ್ , ಡೀಸೆಲ್ ಬೆಲೆಯಲ್ಲಿ ಸರಾಸರಿ 15 ರಿಂದ 19 ಪೈಸೆಯಷ್ಟು ಇಳಿಕೆ ಯಾಗಿತ್ತು.
ಸರ್ಕಾರಿ ತೈಲ ಕಂಪನಿಗಳ ಇಂದು (ಅಕ್ಟೋಬರ್ 1, ಶುಕ್ರವಾರ) ಪೆಟ್ರೋಲ್, ಡೀಸೆಲ್ ಬೆಲೆಯನ್ನು ಏರಿಕೆ ಮಾಡಿದ್ದು, ಇಂದು ಲೀಟರ್ ಪೆಟ್ರೋಲ್ ದರ 22 ರಿಂದ 30 ಪೈಸೆ ಹೆಚ್ಚಳವಾಗಿದ್ದರೆ, ಪ್ರತೀ ಲೀಟರ್ ಡೀಸೆಲ್ ದರ 29 ರಿಂದ 32 ಪೈಸೆ ಹೆಚ್ಚಳವಾಗಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 101.89 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.17 ರೂಪಾಯಿ ಇದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 107.95 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.84 ರೂಪಾಯಿ ಆಗಿದೆ. ಅದೇ ರೀತಿ ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 102.47 ರೂಪಾಯಿ ಹಾಗೂ ಲೀಟರ್ ಡಿಸೆಲ್ ದರ 93.27 ರೂಪಾಯಿದೆ ಏರಿಕೆಯಾಗಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 99.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.74 ರೂಪಾಯಿಗೆ ಏರಿಕೆ ಆಗಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 105.44 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.70 ರೂಪಾಯಿಗೆ ಏರಿಕೆ ಆಗಿದೆ.
ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.
ದರ ನಿಗದಿ ಹೇಗೆ?
ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.