ಕಾಸರಗೋಡು: ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‍ನ ಕಾಸರಗೋಡು, ಮಂಜೇಶ್ವರ, ಹೊಸದುರ್ಗ ತಾಲೂಕು ಸಮಿತಿ ವತಿಯಿಂದ 'ಭಜನಾ ಅಭಿಮಾನ-ಅಭಿಯಾನ ಕಾಸರಗೋಡು 2021-22 ಕಾರ್ಯಕ್ರಮದ ಉದ್ಘಾಟನೆ ಅ. 20ರಂದು ಮಧ್ಯಾಹ್ನ 3ಕ್ಕೆ ಮಧೂರು ಶ್ರೀ ಮದನಂತೇಶ್ವರ ದೇವಸ್ಥಾನದ ಮಧುವಾಹಿನಿ ಸಭಾಂಗಣದಲ್ಲಿ ಜರುಗಲಿದೆ.
ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅಭಿಯಾನ ಉದ್ಘಾಟಿಸಿ ಆಶೀರ್ವಚನ ನೀಡುವರು. ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ, ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಸ್ವಾಮೀಜಿ, ಉಪ್ಪಳ ಕೊಂಡೆವೂರು ಶ್ರೀ ಯೋಗಾನಂದ ಸರಸ್ವತೀ ದಿವ್ಯ ಉಪಸ್ಥಿತಿ ವಹಿಸುವರು. ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಆಸ್ರ, ಕುಂಟಾರು ರವೀಶ ತಂತ್ರಿ ಅವರ ಗೌರವ ಉಪಸ್ಥಿತಿಯಿರುವುದು. ಧಾರ್ಮಿಕ ಮುಂದಾಳು ವೆಂಕಟ್ರಮಣ ಹೊಳ್ಳ ಅಧ್ಯಕ್ಷತೆ ವಹಿಸುವರು. ಮಧೂರು ದೇಗುಲ ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಜಯದೇವ ಖಂಡಿಗೆ, ಮಧೂರು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಎಂ. ಬಾಬು, ಶ್ರೀ ಧರ್ಮಸ್ಥಳ ಭಜನಾ ಪರಿಷತ್ ಅಧ್ಯಕ್ಷ ಬಾಲಕೃಷ್ಣ ಪಂಜ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧೀ ಯೋಜನಾಧಿಕಾರಿ ಮುಕೇಶ್, ಶ್ರೀಧರ್ಮಸ್ಥಳ ಜನಜಾಗೃತಿ ವಏದಿಕೆ ಕಾಸರಗೋಡು ಜಿಲ್ಲಾ ಘಟಕ ಅಧ್ಯಕ್ಷ ಅಶ್ವತ್ ಪೂಜರಿ ಲಾಲ್‍ಬಾಗ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.