ಕಾಸರಗೋಡು: ಎಣ್ಮಕಜೆ ಪಂಚಾಯಿತಿ ಪಡ್ರೆ ವಾಣೀನಗರ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಗಣಿತ ಕನ್ನಡ ಮಾಧ್ಯಮ ಮತ್ತು ಹಿಂದಿ ಭಾಷೆಯ ತಲಾ ಒಬ್ಬ ಶಿಕ್ಷಕರ ತಾತ್ಕಾಲಿಕ ನೆಲೆಯಲ್ಲಿ ನೇಮಕಾತಿ ನ. 2ರಂದು ಬೆಳಗ್ಗೆ 10.30ಕ್ಕೆ ಶಾಲಾ ಕಚೇರಿಯಲ್ಲಿ ಜರುಗಲಿದೆ. ಆಸಕ್ತ ಅಭ್ಯರ್ಥಿಗಳು ಮೂಲ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವಂತೆ ಪ್ರಕಟಣೆ ತಿಳಿಸಿದೆ.
ಹಿಂದಿ ಶಿಕ್ಷಕರ ನೇಮಕ:
ಕಾಞಂಗಾಡು ಸೌತ್ ಅರಯಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತೆರವಾಗಿರುವ ಹಿಂದಿ ಶಿಕ್ಷಕ ಹುದ್ದೆಗೆ ತಾತ್ಕಾಲಿಕ ನೆಲೆಯಲ್ಲಿ ನೇಮಕಾತಿ ನಡೆಯಲಿರುವುದು. ಈ ಬಗ್ಗೆ ಸಂದರ್ಶನ ನ. 1ರಂದು ಮಧ್ಯಾಹ್ನ 2ಗಂಟೆಗೆ ಶಾಲಾ ಕಚೇರಿಯಲ್ಲಿ ನಡೆಯಲಿದ್ದು, ಅಭ್ಯರ್ಥಿಗಳು ಅಸಲಿ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವಂತೆ ಪ್ರಕಟಣೆ ತಿಳಿಸಿದೆ.ದೂರವಾಣಿ(0467 2200868)