ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮತ್ತೆ ಬುಧವಾರ ಏರಿಕೆಯಾಗಿದೆ. ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ ಇಂದು ಲೀಟರ್ ಗೆ 30 ಪೈಸೆ ಡೀಸೆಲ್ ಬೆಲೆ ಲೀಟರ್ ಗೆ 35 ಪೈಸೆ ಏರಿಕೆಯಾಗಿದೆ. ಮುಂಬೈಯಲ್ಲಿ ಪೆಟ್ರೋಲ್ ದರ ಲೀಟರ್ ಗೆ 29 ಪೈಸೆ ಮತ್ತು ಡೀಸೆಲ್ ದರ ಲೀಟರ್ ಗೆ 37 ಪೈಸೆ ಹೆಚ್ಚಳವಾಗಿದೆ.
ದೇಶದ ವಿವಿಧ ಮಹಾನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಈ ಕೆಳಗಿನಂತಿದೆ:
ದೆಹಲಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಕ್ರಮವಾಗಿ 102 ರೂಪಾಯಿ 94 ಪೈಸೆ, 91 ರೂಪಾಯಿ 42 ಪೈಸೆಯಾಗಿದೆ.
ಮುಂಬೈಯಲ್ಲಿ ಪೆಟ್ರೋಲ್ ದರ ಲೀಟರ್ ಗೆ 108 ರೂಪಾಯಿ 96 ಪೈಸೆ ಮತ್ತು 99 ರೂಪಾಯಿ 17 ಪೈಸೆಯಾಗಿದೆ.
ಕೋಲ್ಕತ್ತಾದಲ್ಲಿ ಪೆಟ್ರೋಲ್ ದರ ಲೀಟರ್ ಗೆ 103 ರೂಪಾಯಿ 65 ಪೈಸೆ ಮತ್ತು ಡೀಸೆಲ್ ದರ ಲೀಟರ್ ಗೆ 94 ರೂಪಾಯಿ 53 ಪೈಸೆಯಾಗಿದೆ. ಚೆನ್ನೈಯಲ್ಲಿ ಪೆಟ್ರೋಲ್ ದರ ಲೀಟರ್ ಗೆ 100 ರೂಪಾಯಿ 49 ಪೈಸೆ ಮತ್ತು ಡೀಸೆಲ್ ದರ 95 ಪೈಸೆ 93 ಪೈಸೆಯಾಗಿದೆ.