ಮುಳ್ಳೇರಿಯ: ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ದೇಶದಲ್ಲಿ 100 ಕೋಟಿ ಲಸಿಕೆ ನೀಡುವಲ್ಲಿ ಯಶಸ್ವಿಯಾದ ಹಿನ್ನೆಲೆಯಲ್ಲಿ ಬಿಜೆಪಿ ನೇತೃತ್ವದಲ್ಲಿ ಬೆಳ್ಳೂರು ಆರೋಗ್ಯ ಕೇಂದ್ರ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರನ್ನು ಗೌರವಿಸಲಾಯಿತು.
ಬಿಜೆಪಿ ಕಾಸರಗೋಡು ಜಿಲ್ಲಾಧ್ಯಕ್ಷ ರವೀಶ ತಂತ್ರಿ ಕುಂಟಾರು, ಕಾಸರಗೋಡು ಮಂಡಲ ಪ್ರಧಾನ ಕಾರ್ಯದರ್ಶಿ ಸುನಿಲ್ ಪಿಆರ್, ಬೆಳ್ಳೂರು ಗ್ರಾ.ಪಂ.ಅಧ್ಯಕ್ಷ ಶ್ರೀಧರ ಎಂ., ಉಪಾಧ್ಯಕ್ಷೆ ಗೀತಾ ಕೆ., ಬಿಜೆಪಿ ಜನ ಪ್ರತಿನಿಧಿಗಳು, ಬಿಜೆಪಿ ಬೆಳ್ಳೂರು ಪಂಚಾಯಿತಿ ಸಮಿತಿ ಅಧ್ಯಕ್ಷ ಜಯಾನಂದ ಕುಳ, ಪ್ರಧಾನ ಕಾರ್ಯದರ್ಶಿ ಗಣೇಶ್ ಪ್ರಸಾದ್ ನಾಕೂರು, ಬೆಳ್ಳೂರು ಸೇವಾಸಹಕಾರಿ ಬ್ಯಾಂಕ್ ಅಧ್ಯಕ್ಷ ಸುಬ್ರಹ್ಮಣ್ಯ ಕಡಂಬಳಿತ್ತಾಯ, ಬಿಜೆಪಿ ಕಾರ್ಯಕರ್ತರು, ಮತ್ತಿತರರು ಉಪಸ್ಥಿತರಿದ್ದರು.