ಕಾಸರಗೋಡು: ರಾಷ್ಟ್ರೀಯ ರಕ್ತದಾನ ದಿನಾಚರಣೆಯ ಜಿಲ್ಲಾ ಮಟ್ಟದ ಉದ್ಘಾಟನೆ ಜರುಗಿತು. ಜಿಲ್ಲಾ ಮೆಡಿಕಲ್ ಕಚೇರಿ, ರಾಷ್ಟ್ರೀಯ ಆರೋಗ್ಯ ದೌತ್ಯ, ಏಡ್ಸ್ ನಿಯಂತ್ರಣ ಸೊಸೈಟಿ, ಕಾಞಂಗಾಡು ನೆಹರೂ ಕಲಾ ವಿಜ್ಞಾನ ಕಾಲೇಜಿನ ಎನ್.ಎಸ್.ಎಸ್. ಘಟಕಗಳ ಜಂಟಿ ವತಿಯಿಂದ ಕಾರ್ಯಕ್ರಮ ಜರುಗಿತು. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬೇಬಿ ಬಾಲಕೃಷ್ಣನ್ ಉದ್ಘಾಟಿಸಿದರು.ಸಹಾಯಕ ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ಟಿ.ಮನೋಜ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಹೆಚ್ಚುವರಿ ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್, ಜಿಲ್ಲಾ ಐ.ಎಂ.ಎ. ಅಧ್ಯಕ್ಷ ಡಾ. ಬಿ.ನಾರಾಯಣ ನಾಯ್ಕ್, ಕಾಞಂಗಾಡು ಜಿಲ್ಲಾ ಆಸ್ಪತ್ರೆ ರಕ್ತ ಬ್ಯಾಂಕ್ ವೈದ್ಯಾಧಿಕಾರಿ ಡಾ.ನಿಮ್ಮಿ ಜಾನ್ ಮೊದಲಾದವರು ಉಪಸ್ಥಿತರಿದ್ದರು.