ತಿರುವನಂತಪುರಂ: ಕೊರೊನಾ ಆತಂಕದ ನಡುವೆ ರಾಜ್ಯದಲ್ಲಿ ಶಾಲಾರಂಭಕ್ಕೆ ಸಿದ್ಧತೆ ನಡೆಯುತ್ತಿದೆ ಎಂದು ಶಿಕ್ಷಣ ಸಚಿವ ವಿ.ಎಸ್. ಶಿವಂ ಕುಟ್ಟಿ ಹೇಳಿದರು. ಸ್ವಚ್ಛತಾ ಕಾರ್ಯದಲ್ಲಿ ಯುವ ಸಂಘಟನೆಗಳು ಭಾಗಿಯಾಗಲಿವೆ ಎಂದು ಭರವಸೆ ನೀಡಿದರು.
ಶಾಲೆಗಳಲ್ಲಿ ಹಾಜರಾತಿ ಕಡ್ಡಾಯವಾಗಿರುವುದಿಲ್ಲ. ಶಾಲೆಗಳ ಕಾರ್ಯನಿರ್ವಹಣೆಗೆ ಸಂಬಂಧಿಸಿದಂತೆ ಆದಷ್ಟು ಬೇಗ ಮಾರ್ಗಸೂಚಿಗಳನ್ನು ನೀಡಲಾಗುವುದು. ಎಲ್ಲಾ ತಡೆಗಟ್ಟುವ ಕ್ರಮಗಳನ್ನು ಅಳವಡಿಸಿಕೊಂಡ ನಂತರ ಶಾಲೆಗಳು ಕಾರ್ಯನಿರ್ವಹಿಸುತ್ತವೆ. ಶಾಲೆ ತೆರೆಯುವ ಕುರಿತು ಪೋಷಕರ ಕಾಳಜಿಯನ್ನು ಪರಿಹರಿಸಲು ಜಾಗೃತಿ ಆರಂಭಿಸಲಾಗಿದೆ ಎಂದು ಅವರು ಹೇಳಿದರು.
ತರಗತಿಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಮತ್ತು ಶಿಪ್ಟ್ ವ್ಯವಸ್ಥೆಯನ್ನು ನಿರ್ಧರಿಸುವ ಅಧಿಕಾರವನ್ನು ಆಯಾ ಶಾಲೆಗಳು ಹೊಂದಿವೆ. ಈ ತಿಂಗಳ 5 ರ ಬಳಿಕ, ಶಾಲೆ ತೆರೆಯುವವರೆಗೆ ನಡೆಸುವ ಚಟುವಟಿಕೆಗಳ ಕುರಿತಾದ ವೇಳಾಪಟ್ಟಿಯನ್ನು ನಿಗದಿಪಡಿಸಲಾಗುವುದು ಎಂದು ಶಿವಂಕುಟ್ಟಿ ಹೇಳಿದರು. ನವೆಂಬರ್ 1 ರಿಂದ ರಾಜ್ಯದಲ್ಲಿ ಶಾಲೆಗಳ ಪುನರಾರಂಭಕ್ಕೆ ಚಿಂತನೆ ನಡೆಸಲಾಗಿದೆ.