HEALTH TIPS

ಹಡಗಿನಲ್ಲಿ ಡ್ರಗ್ಸ್ ಪಾರ್ಟಿ: ಶಾರುಖ್ ಖಾನ್ ಪುತ್ರನನ್ನು ಬಂಧಿಸಿದ ಎನ್‌ಸಿಬಿ

             ಮುಂಬೈ: ಮುಂಬೈನ ತೀರ ಪ್ರದೇಶದ ಐಷಾರಾಮಿ 'ಕ್ರೂಸ್' ಹಡಗಿನಲ್ಲಿ ನಡೆದಿದೆ ಎನ್ನಲಾದ ಡ್ರಗ್ಸ್‌ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್‌ರನ್ನು ರಾಷ್ಟ್ರೀಯ ಮಾದಕ ವಸ್ತು ನಿಯಂತ್ರಣ ಘಟಕದ (ಎನ್‌ಸಿಬಿ) ಅಧಿಕಾರಿಗಳು ಅಧಿಕೃತವಾಗಿ ಬಂಧಿಸಿದ್ದಾರೆ.


             ಆರ್ಯನ್ ಜೊತೆ ಇನ್ನೂ ಏಳು ಜನರನ್ನು ಬಂಧಿಸಲಾಗಿದೆ ಎಂದು ಎನ್‌ಸಿಬಿ ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತರಲ್ಲಿ ಇಬ್ಬರು ಯುವತಿಯರೂ ಇದ್ದು, ಆರ್ಯನ್ ಖಾನ್ ಸೇರಿದಂತೆ ಮುನ್‌ಮುನ್ ದಮೇಚಾ, ನೂಪೂರ್ ಸಾರಿಕಾ, ಇಸ್‌ಮಿತ್ ಸಿಂಗ್, ಮೋಹಕ್ ಜೆಸ್ವಾಲ್, ವಿಕ್ರಾಂತ್ ಚೊಕ್ಕರ್, ಗೋಮಿತ್ ಚೋಪ್ರಾ, ಅರ್ಬಾಜ್ ಮರ್ಚಂಟ್ ಎನ್ನುವವರು ಇದ್ದಾರೆ ಎಂದು ಎನ್‌ಸಿಬಿ ತಿಳಿಸಿದೆ.

         ಆರ್ಯನ್ ಖಾನ್ ಹಾಗೂ ಇತರ ಏಳು ಜನರ ಮೇಲೆ ಎನ್‌ಡಿಪಿಎಸ್‌ ಕಾಯ್ದೆ 8ಸಿ, 20ಬಿ, 27 ಮತ್ತು 35 ರ ಅಡಿ ಪ್ರಕರಣ ದಾಖಲಾಗಿದೆ.

               ಹೆಚ್ಚಿನ ವಿಚಾರಣೆಗಾಗಿ ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ವಶಕ್ಕೆ ತೆಗೆದುಕೊಳ್ಳುವ ಸಾಧ್ಯತೆ ಇದೆ. ಬಂಧಿತರನ್ನು ವೈದ್ಯಕೀಯ ತಪಾಸಣೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

       ತಮ್ಮ ಮಗನ ಬಂಧನ ಸುದ್ದಿ ತಿಳಿದಿರುವ ಶಾರುಖ್‌ ಖಾನ್ ಅವರು ಸ್ಪೇನ್‌ನಲ್ಲಿ ಚಿತ್ರೀಕರಣ ನಿಲ್ಲಿಸಿ ಭಾರತಕ್ಕೆ ಬರುತ್ತಿದ್ದಾರೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿವೆ.

      ಮಾದಕ ದ್ರವ್ಯ ಪತ್ತೆ: ಹಡಗಿನ ಮೇಲೆ ದಾಳಿ ನಡೆದಿದ್ದಾಗ ಕೋಕೆನ್, ಚರಸ್, ಎಂಡಿಎಂ ಹಾಗೂ ಎಕ್‌ಸ್ಟಾಸಿ ಎಂಬ ಮಾದಕ ದ್ರವ್ಯಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಪಾರ್ಟಿಯಲ್ಲಿ ಡ್ರಗ್ಸ್‌ ಬಳಕೆ ಮಾಡುತ್ತಿರುವ ಮಾಹಿತಿಯನ್ನು ಆಧರಿಸಿ ಶನಿವಾರ ರಾತ್ರಿ ಮಹಾರಾಷ್ಟ್ರದ ಎನ್‌ಸಿಬಿ ಅಧಿಕಾರಿಗಳು ಪ್ರಯಾಣಿಕರ 'ಕ್ರೂಸ್‌' ಹಡಗಿನ ಮೇಲೆ ದಾಳಿ ನಡೆಸಿದ್ದರು.

         ನೂರಾರು ಮಂದಿ ಪ್ರಯಾಣಿಕರಿದ್ದ ಹಡಗು ಗೋವಾ ಕಡೆಗೆ ಸಾಗುವುದಿತ್ತು. ಹಡಗಿನಲ್ಲಿ ಪಾರ್ಟಿ ನಡೆಯುತ್ತಿರುವ ಮಾಹಿತಿಯನ್ನು ಆಧರಿಸಿ ಎನ್‌ಸಿಬಿ ಅಧಿಕಾರಿ ಸಮೀರ್‌ ವಾಂಖೆಡೆ ನೇತೃತ್ವದ ಎನ್‌ಸಿಬಿ ತಂಡವು ಹಡಗಿನಲ್ಲಿ ಶೋಧ ಕಾರ್ಯ ನಡೆಸಿದ್ದರು. ಈ ವೇಳೆ ಹಡಗಿನಲ್ಲಿ ಆರ್ಯನ್ ಖಾನ್ ಕೂಡ ಪತ್ತೆಯಾಗಿದ್ದರು.

               ಕೆಲವು ಪ್ರಯಾಣಿಕರಿಂದ ನಿಷೇಧಿತ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಹಾಗೂ ಯಾವುದೇ ಪ್ರಯಾಣಿಕರಿಗೆ ಹಡಗಿನಿಂದ ಹೊರಹೋಗಲು ಅವಕಾಶ ನೀಡಿಲ್ಲ, ಹಾಗೇ ಆರ್ಯನ್ ಖಾನ್ ಅವರನ್ನು ಕೂಡ ವಿಚಾರಣೆ ನಡೆಸಲಾಗಿದೆ. ಆದರೆ, ಅವರು ಡ್ರಗ್ಸ್ ಬಳಕೆ ಮಾಡಿದ್ದರೇ ಎಂಬುದು ಇನ್ನೂ ಖಚಿತವಾಗಿಲ್ಲ ಎಂದು ಎನ್‌ಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries