ಕಾಸರಗೋಡು: ಬಿಜೆಪಿ ಕಾಸರಗೋಡು ಮಂಡಲ ಸಮಿತಿ ವತಿಯಿಂದ ಗಾಂಧಿಜಯಂತಿ ಅಂಗವಾಗಿ ತಿರಂಗಾ ಯಾತ್ರೆ ಶನಿವಾರ ನಡೆಯಿತು. ಜಿಲ್ಲಾಧಿಕಾರಿ ಕಚೇರಿ ಸನಿಹದ ಮಹಾತ್ಮಾಗಾಂಧಿ ಪ್ರತಿಮೆಗೆ ಪುಷ್ಪಾರ್ಚನೆ ನಡೆಸುವ ಮೂಲಕ ತಿರಂಗ ಯಾತ್ರೆಗೆ ಬಿಜೆಪಿ ಜಿಲ್ಲಾ ಸಮಿತಿ ಅಧ್ಯಕ್ಷ ಕೆ.ಶ್ರೀಕಾಂತ್ ಚಾಲನೆ ನೀಡಿದರು.
ಈ ಸಂದರ್ಭ ಮಾತನಾಡಿದ ಅವರು ಮಹಾತ್ಮಾ ಗಾಂಧಿ ಅವರ ಆದರ್ಶಗಳನ್ನುಗಾಳಿಗೆ ತೂರಿರುವ ಕಾಂಗ್ರೆಸ್, ಅವರ ಹೆಸರಲ್ಲಿ ಕೇವಲ ರಾಜಕೀಯ ನಡೆಸುತ್ತಿರುವುದಾಗಿ ತಿಳಿಸಿದರು. ಬಿಜೆಪಿ ಕಾಸರಗೋಡು ಮಂಡಲ ಸಮಿತಿ ಅಧ್ಯಕ್ಷ ಹರೀಶ್ ನಾರಂಪಾಡಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಧಾಮ ಗೋಸಾಡ. ಮುಖಂಡರಾದ ಸವಿತಾ ಟೀಚರ್, ಎನ್. ಸತೀಶ್, ಮಧೂರ್ ಗ್ರಾಪಂ ಅಧ್ಯಕ್ಷ ಗೋಪಾಲಕೃಷ್ಣ, ಬೆಳ್ಳೂರು ಗ್ರಾಪಂ ಅಧ್ಯಕ್ಷ ಶ್ರೀಧರ ಬೆಳ್ಳುರು, ಪಕ್ಷದ ಮಂಡಲ, ಪಂಚಾಯಿತಿ ಸಮಿತಿ ಸದಸ್ಯರು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.