ಕಾಸರಗೋಡು: ಪ್ರಧಾನಿ ನರೇಂದ್ರಮೋದಿ ಅವರ ದೂರದರ್ಶಿತ್ವ ಹಾಗೂ ಅಭಿವೃದ್ದಿಪರ ಚಿಂತನೆ ದೇಶವನ್ನು ಸ್ವಾವಲಂಬನೆಯೆಡೆಗೆ ಕೊಂಡೊಯ್ದಿರುವುದಾಗಿ ಬಿಜೆಪಿ ರಾಜ್ಯ ಸಮಿತಿ ಉಪಾಧ್ಯಕ್ಷ ಸದಾನಂದನ್ ಮಾಸ್ಟರ್ ತಿಳಿಸಿದ್ದಾರೆ.
ಅವರು ಸೇವಾ ಸಮರ್ಪಣ್ ಅಭಿಯಾನದ ಅಂಗವಾಗಿ ಬುಧವಾರ ಕಾಸರಗೋಡು ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಕಚೇರಿ ಸಭಾಂಗಣದಲ್ಲಿಆಯೋಜಿಸಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ರಾಜ್ಯ ಸಮಿತಿ ಕಾರ್ಯದರ್ಶಿ ಕೆ. ಶ್ರೀಕಾಂತ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸಮಿತಿ ಅಧ್ಯಕ್ಷ ರವೀಶ ತಂತ್ರಿ ಕುಂಟಾರು. ಎ. ವೇಲಾಯುಧನ್, ಕೋಳಾರು ಸತೀಶ್ಚಂದ್ರ ಭಂಡಾರಿ. ಸುಧಾಮ ಗೋಸಾಡ ಉಪಸ್ಥಿತರಿದ್ದರು. ಕೃಷಿಕಮೋರ್ಚಾ ಜಿಲ್ಲಾ ಅಧ್ಯಕ್ಷ ಬಳಾಲ್ ಕುಞÂಕಣ್ಣನ್ ಸ್ವಾಗತಿಸಿದರು. ಓಬಿಸಿ ಮೋರ್ಚಾ ಅಧ್ಯಕ್ಷ ಪ್ರೇಮ್‍ರಾಜ್ ಕಾಲಿಕಡವು ವಂದಿಸಿದರು.