ಕಾಸರಗೋಡು: ನಗರದ ನುಳ್ಳಿಪ್ಪಾಡಿಯಲ್ಲಿ ಚಟುವಟಿಕೆ ನಡೆಸುತ್ತಿರುವ ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯದ ವಿಂಶತಿ ಸಂಭ್ರಮದ ಆಚರಣೆ ಅಂಗವಾಗಿ ಸಮಿತಿ ವತಿಯಿಂದ ವಿವಿಧ ಕಾರ್ಯಕ್ರಮ ಅ. 2ರಂದು ಜರುಗಲಿದೆ.
ಕಾರ್ಯಕ್ರಮದ ಅಂಗವಾಗಿ ವಿವಿಧಕ್ಷೇತ್ರಗಳಲ್ಲಿ ಸೇವೆಸಲ್ಲಿಸಿರುವ 20ಮಂದಿ ಸಾಧಕರನ್ನು ಗರುತಿಸಿ ಗೌರವಿಸಲಾಗುವುದು. ಈ ನಿಟ್ಟಿನಲ್ಲಿ ಅ. 2ರಂದು ಮೂವರು ಹಿರಿಯ ವ್ಯಕ್ತಿಗಳಿಗೆ ಗುರುನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಕನ್ನಡ ಹೋರಾಟಗಾರ, ಶಿಕ್ಷಣ ತಜ್ಞ ಬಿ. ಪುರುಷೋತ್ತಮ, ನಿವೃತ್ತ ಶಿಕ್ಷಕ, ಸಾಂಸ್ಕøತಿಕ ರಂಗದ ಧೀಮಂತ ಕೆ. ಸುಂದರ ಶೆಟ್ಟಿ ಮಾಸ್ಟರ್, ಹಿರಿಯ ಸಾಮಾಜಿಕ, ರಾಜಕೀಯ ಮುಖಂಡ ಕೆ. ಸುಂದರ ರಾವ್ ಅವರನ್ನು ಅವರ ನಿವಾಸಗಳಲ್ಲಿ ಸನ್ಮಾನಿಸಲಾಗುವುದು. ಈ ಸಂದರ್ಭ 20ಮಂದಿ ಯುವ ಸಾಧಕರಿಗೆ ಕನ್ನಡ ಪಯಸ್ವಿನಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.