ನವದೆಹಲಿ: 12ರಿಂದ 18 ವರ್ಷ ವಯಸ್ಸಿನ ಮಕ್ಕಳ ಮೇಲೆ ಕೋವ್ಯಾಕ್ಸಿನ್ ಕೋವಿಡ್ ಲಸಿಕೆಯ ಕ್ಲಿನಿಕಲ್ ಪ್ರಯೋಗಕ್ಕೆ ಸಂಬಂಧಿಸಿದ ದತ್ತಾಂಶವನ್ನು ಭಾರತ್ ಬಯೋಟೆಕ್ ಕಂಪನಿಯು ಭಾರತೀಯ ಪ್ರಧಾನ ಔಷಧ ನಿಯಂತ್ರಕರಿಗೆ (ಡಿಸಿಜಿಐ) ಬುಧವಾರ ಸಲ್ಲಿಸಿದೆ.
ಮಕ್ಕಳಲ್ಲಿ ಕೋವ್ಯಾಕ್ಸಿನ್ ಲಸಿಕೆಯ ತುರ್ತು ಬಳಕೆಗೆ ಡಿಸಿಜಿಐ ಮತ್ತು ಕೇಂದ್ರ ಸರ್ಕಾರ ಶೀಘ್ರವೇ ಅನುಮೋದನೆ ನೀಡಲಿವೆ ಎಂದು ಇತ್ತೀಚೆಗೆ ವರದಿಯಾಗಿತ್ತು.