ಕಾಸರಗೋಡು: ದೀರ್ಘಕಾಲದ ಶಿಕ್ಷಕ ವೃತ್ತಿಯ ನಂತರ ನಿವೃತ್ತರಾದ ಕೂಡ್ಲು ಶ್ರೀ ಗೋಪಾಲಕೃಷ್ಣ ಪ್ರೌಢಶಾಲಾ ಅಧ್ಯಾಪಕ ವಿಶಾಲಾಕ್ಷ ಪುತ್ರಕಳ ಅವರನ್ನು ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ವತಿಯಿಂದ ಅಭಿನಂದಿಸಲಾಯಿತು.
ಪತ್ರಕರ್ತ,ವ್ಯಂಗ್ಯಚಿತ್ರಕಾರ,ಅಧ್ಯಾಪಕ ಹೀಗೆ ವಿವಿಧ ರಂಗಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದ ಇವರು ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಜತೆಕಾರ್ಯದರ್ಶಿ,ಸಂಘಟನಾ ಕಾರ್ಯದರ್ಶಿ,ಪ್ರಧಾನ ಕಾರ್ಯದರ್ಶಿ,ಅಧ್ಯಕ್ಷ, ಅಧಿಕೃತ ವಕ್ತಾರರಾಗಿ ಸೇವೆ ಸಲ್ಲಿಸಿದ್ದಾರೆ. ಕಾಸರಗೋಡು ಜಿಲ್ಲಾ ವಿದ್ಯಾಧಿಕಾರಿ ಎನ್.ನಂದಿಕೇಶನ್ ಅವರು ಶಾಲುಹೊದಿಸಿ,ಫಲಪುಷ್ಪ, ಸ್ಮರಣಿಕೆ ನೀಡಿ ಅಭಿನಂದಿಸಿದರು.
ಎಡನೀರು ಸ್ವಾಮೀಜೀಸ್ ಹೈಯರ್ ಸೆಕೆಂಡರಿ ಶಾಲಾ ಅಧ್ಯಾಪಕ ಹರೀಶ.ಎನ್ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಉಪಜಿಲ್ಲಾ ವಿದ್ಯಾಧಿಕಾರಿಗಳಾದ ಎಸ್.ವಿ.ಭಟ್, ಕೆ ಪುಂಡರೀಕಾಕ್ಷ ಆಚಾರ್ಯ,ಅಧ್ಯಾಪಕರ ಸಂಘದ ಅಧ್ಯಕ್ಷ ರವೀಂದ್ರನಾಥ ಬಲ್ಲಾಳ್, ಕೋಶಾಧಿಕಾರಿ ಪದ್ಮಾವತಿ.ಯಂ, ವೆಂಕಟಕೃಷ್ಣ ಎಡನೀರು ಉಪಸ್ಥಿತರಿದ್ದರು. ಕಾಸರಗೋಡು ಉಪಜಿಲ್ಲಾ ಕಾರ್ಯದರ್ಶಿ ಬಾಬು.ಕೆ ಬಂದಡ್ಕ ಸ್ವಾಗತಿಸಿದರು. ಜತೆ ಕಾರ್ಯದರ್ಶಿ ವಿನೋದ್ ರಾಜ್ ಕಲ್ಲಕಟ್ಟ ವಂದಿಸಿದರು.