ಕಾಸರಗೋಡು: ಬಿಜೆಪಿ ಹಿರಿಯ ಮುಖಂಡ, ಸಹಕಾರಿ ಧುರೀಣ ದಿ. ನಂಜಿಲ್ ಕುಞÂರಾಮನ್ ಸಂಸ್ಮರಣಾ ಸಮಾರಂಭ ಪಕ್ಷದ ಜಿಲ್ಲಾ ಸಮಿತಿ ಕಚೇರಿ ಸಭಾಂಗಣದಲ್ಲಿ ಜರುಗಿತು. ಬಿಜೆಪಿ ರಾಜ್ಯ ಸಮಿತಿ ಅಧ್ಯಕ್ಷ ಕೆ. ಸುರೇಂದ್ರನ್ ಸಮಾರಂಭ ಉದ್ಘಾಟಿಸಿ ಮಾತನಾಡಿ, ಪಕ್ಷದ ಬೆಳವಣಿಗೆಗೆ ತಮ್ಮ ಜೀವ ಮುಡಿಪಾಗಿರಿಸಿದ್ದ ನಂಜಿಲ್ ಕುಞÂರಾಮನ್ ಅವರು ಬೂತ್ ಮಟ್ಟದಿಂದ ಪಕ್ಷವನ್ನು ಕಟ್ಟಿಬೆಳೆಸಿದ್ದ ಅವರು ಸಹಕಾರಿ ವಲಯದಲ್ಲೂ ತಮ್ಮ ಛಾಪು ಮೂಡಿಸಿರುವುದಾಗಿ ತಿಳಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ರವೀಶ ತಂತ್ರಿ ಕುಂಟಾರು ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಸಮಿತಿ ಕಾರ್ಯದರ್ಶಿ ಕೆ. ಶ್ರೀಕಾಂತ್, ಎಂ. ಸಂಜೀವ ಶೆಟ್ಟಿ, ಪ್ರಮಿಳಾ ಸಿ.ನಾಯ್ಕ್ ಉಪಸ್ಥೀತರಿದ್ದರು.