ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ‘ಪಾಪ ಪಾಂಡು’ ಧಾರಾವಾಹಿಯ ಕಲಾವಿದ ಶಂಕರ್ ರಾವ್ ನಿಧನರಾಗಿದ್ದಾರೆ.
ಸೋಮವಾರ ಬೆಳಗಿನ ಜಾವ 6.30ರ ಸುಮಾರಿಗೆ ಅವರು ಕೊನೆಯುಸಿರು ಎಳೆದರು ಎಂದು ತಿಳಿದುಬಂದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ 84 ವರ್ಷ ವಯಸ್ಸಾಗಿತ್ತು. ಶಂಕರ್ ರಾವ್ ನಿಧನಕ್ಕೆ ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಮತ್ತು ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ.,
ತುಮಕೂರು ಮೂಲದ ಶಂಕರ್ ರಾವ್ ಅವರು ವೈವಿದ್ಯಮಯ ಪಾತ್ರಗಳನ್ನು ನಿರ್ವಹಿಸಿದ ಅಪಾರ ಅನುಭವ ಉಳ್ಳವರು. ಅದರಲ್ಲೂ ಹಾಸ್ಯ ಪಾತ್ರಗಳಲ್ಲಿ ಮಿಂಚಿ ಕನ್ನಡಿಗರನ್ನು ರಂಜಿಸಿದವರು.