ಕಾಸರಗೋಡು: ಸ್ವಾತಂತ್ರ್ಯೋತ್ಸವದ 75ನೇ ವಾರ್ಷಿಕ'ಆಜಾದಿಕಾ ಅಮೃತ್ ಮಹೋತ್ಸವ್'ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ಶುಚಿತ್ವ ಮಿಶನ್ ಹಾಗೂ ನೆಹರೂ ಯುವಕೇಂದ್ರ ವತಿಯಿಂದ ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ಉದ್ಘಾಟನಾ ಕಾರ್ಯಕ್ರಮ ಅ. 1ರಂದು ಬೆಳಗ್ಗೆ 10.30ಕ್ಕೆ ವಿವಿಲ್ ಸ್ಟೇಶನ್ ವಠಾರದಲ್ಲಿ ಜರುಗಲಿದೆ.
ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣ್‍ವೀರ್‍ಚಂದ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಮಾಲಿನ್ಯದಿಂದ ಸ್ವಾತಂತ್ರ್ಯ ಘೋಷಣೆಯೊಂದಿಗೆ ಅ. 1ರಿಂದ 31ರ ವರೆಗೆ ಕೇಂದ್ರ-ರಾಜ್ಯ ಸರ್ಕಾರಿ ಕಚೇರಿಗಳು, ಶಾಲೆ, ಅಂಗನವಾಡಿ, ಗ್ರಂಥಾಲಯ ಸೇರಿದಂತೆ ನಾನಾ ಕಡೆ ಸ್ವಚ್ಛತಾ ಕಾರ್ಯಕ್ರಮ ನಡೆಯಲಿರುವುದಾಗಿ ಪ್ರಕಟಣೆ ತಿಳಿಸಿದೆ.