ಕಾಸರಗೋಡು: ಮುಳಿಯಾರು ಗ್ರಾಮ ಪಂಚಾಯತ್ ನಲ್ಲಿ ಶುಚಿತ್ವ ಸಪ್ತಾಹ ಆರಂಭಗೊಂಡಿದೆ. ಇದರ ಅಂಗವಾಗಿ ಬೋವಿಕ್ಕಾನ ಪೇಟೆಯ ಶುಚೀಕರಣ ನಡೆಯಿತು. ಪಂಚಾಯತ್ ಸದಸ್ಯರು, ಮುಳಿಯಾರು ಸಾಮಾಜಿಕ ಆರೋಗ್ಯ ಕೇಂದ್ರ, ಸಾರ್ವಜನಿಕ ಆರೋಗ್ಯ ವಿಭಾಗ ಸಿಬ್ಬಂದಿ ಮೊದಲಾದವರು ನೇತೃತ್ವ ವಹಿಸಿದ್ದರು. ಮುಳಿಯಾರು ಗ್ರಾಮ ಪಂಚಾಯತ್ ಅಧ್ಯಕ್ಷ ಪಿ.ವಿ.ಮಿನಿ ಉದ್ಘಾಟಿಸಿದರು. ಸ್ಥಾಯೀ ಸಮಿತಿ ಅಧ್ಯಕ್ಷೆ ಅನೀಸಾ ಮನ್ಸೂರ್ ಮಲ್ಲ ಅಧ್ಯಕ್ಷತೆ ವಹಿಸಿದ್ದರು. ಅನೇಕ ಗಣ್ಯರು ಉಪಸ್ಥಿತರಿದ್ದರು.