ಸಮರಸ ಚಿತ್ರ ಸುದ್ದಿ: ಕೆ.ಪಿ.ಎಸ್.ಟಿ.ಎ ಕುಂಬಳೆ ಉಪಜಿಲ್ಲಾ ಸಮಿತಿಯ ವತಿಯಿಂದ ಗಾಂಧಿ ಜಯಂತಿಯ ಪ್ರಯುಕ್ತ ಗಾಂಧಿ ಸ್ಮೃತಿ , ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಕಾರ್ಯಕ್ರಮ ಚೇಡಿಕ್ಕಾನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿತು. ಕೆ.ಪಿ.ಎಸ್.ಟಿ.ಎ ರಾಜ್ಯ ಕೌನ್ಸಿಲರ್ ಯೂಸುಫ್ ಮಾಸ್ತರ್, ಜಿಲ್ಲಾ ಕೋಶಧಿಕಾರಿ ಪ್ರಶಾಂತ್ ಕಾನತ್ತೂರು, ಉಪ ಜಿಲ್ಲಾ ಕಾರ್ಯದರ್ಶಿ ರಾಧಾಕೃಷ್ಣ ಮಾಸ್ತರ್, ಕೋಶಾಧಿಕಾರಿ ನಿರಂಜನ್ ರೈ ಪೆರಡಾಲ, ಶಾಲೆಯ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.