ಶ್ರೀನಗರ: ಉಗ್ರ ಸಂಘಟನೆ ಲಷ್ಕರ್ ಎ ತಯಬಾ ಜೊತೆಗೆ ಸಂಪರ್ಕ ಹೊಂದಿರುವ ಯುನೈಟೆಡ್ ಲಿಬರೇಷನ್ ಫ್ರಂಟ್ (ಯುಎಲ್‌ಎಫ್), ಕಾಶ್ಮೀರದಲ್ಲಿ ಬಿಹಾರ ಮೂಲದ ಕಾರ್ಮಿಕರನ್ನು ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದೆ. ಅಷ್ಟಲ್ಲದೆ, ಕಣಿವೆ ರಾಜ್ಯದಲ್ಲಿರುವ ವಲಸೆ ಕಾರ್ಮಿಕರಿಗೆ ಎಚ್ಚರಿಕೆಯನ್ನೂ ನೀಡಿದೆ.
ಉಗ್ರರು ದಕ್ಷಿಣ ಕಾಶ್ಮೀರದ ಕುಲ್ಗಾಂನಲ್ಲಿರುವ ಮನೆಯೊಂದಕ್ಕೆ ನುಗ್ಗಿ ವಲಸೆ ಕಾರ್ಮಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ ಬಿಹಾರ ಮೂಲದ ಇಬ್ಬರು ಮೃತಪಟ್ಟು, ಮತ್ತೊಬ್ಬರು ಗಾಯಗೊಂಡಿದ್ದರು.
ಕಾಶ್ಮೀರ: ಉಗ್ರರಿಂದ ಇಬ್ಬರು ವಲಸೆ ಕಾರ್ಮಿಕರ ಗುಂಡಿಕ್ಕಿ ಹತ್ಯೆ
ಶನಿವಾರ ನಡೆದ ದಾಳಿ ವೇಳೆ ಉತ್ತರ ಪ್ರದೇಶ ಮತ್ತು ಬಿಹಾರದ ಇಬ್ಬರು ಕಾರ್ಮಿಕರು ಸಾವಿಗೀಡಾಗಿದ್ದರು. ಸದ್ಯ ಯುಎಲ್‌ಎಫ್ ನೀಡಿರುವ ಎಚ್ಚರಿಕೆಯಿಂದಾಗಿ ಕಣಿವೆಯಲ್ಲಿ ಆತಂಕ ಹೆಚ್ಚಾಗಿದೆ.
ವಲಸೆ ಕಾರ್ಮಿಕರ ಮೇಲೆ ಕಾಶ್ಮೀರದಲ್ಲಿ ನಿರಂತರವಾಗಿ ದಾಳಿ ನಡೆಯುತ್ತಿದ್ದು, ಇದುವರೆಗೆ ಒಟ್ಟು 11 ನಾಗರಿಕರು ಮೃತಪಟ್ಟಿದ್ದಾರೆ.
ಈ ವಿಚಾರವಾಗಿ ಕಳವಳ ವ್ಯಕ್ತಪಡಿಸಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ.
ನಿತೀಶ್ ಅವರು ಮೃತ ಬಿಹಾರಿಗಳ ಕುಟುಂಬಕ್ಕೆ ತಲಾ ಎರಡು ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಭದ್ರತಾ ಶಿಬಿರಗಳಿಗೆ ವಲಸೆ ಕಾರ್ಮಿಕರ ಸ್ಥಳಾಂತರ; ವರದಿ ನಿರಾಕರಿಸಿದ ಪೊಲೀಸ್
ಪರಿಸ್ಥಿತಿ ಚೆನ್ನಾಗಿಲ್ಲ
ಹೆಚ್ಚಾಗುತ್ತಿರುವ ಉಗ್ರರ ದಾಳಿ ಪ್ರಕರಣಗಳಿಂದ ಆತಂಕಗೊಂಡಿರುವ ವಲಸೆ ಕಾರ್ಮಿಕರು, ತಮ್ಮ ರಾಜ್ಯಗಳಿಗೆ ವಾಪಸ್ ಆಗುತ್ತಿದ್ದಾರೆ.
ʼಇಲ್ಲಿ ಪರಿಸ್ಥಿತಿ ಕೆಟ್ಟದಾಗಿದೆ. ನಾವು ಭಯಗೊಂಡಿದ್ದೇವೆ. ನಮ್ಮೊಂದಿಗೆ ಮಕ್ಕಳೂ ಇವೆ. ನಾವು ನಮ್ಮೂರಿಗೆ ವಾಪಸ್ ಆಗುತ್ತಿದ್ದೇವೆʼ ಎಂದು ರಾಜಸ್ಥಾನದ ವಲಸೆ ಕಾರ್ಮಿಕರೊಬ್ಬರು ಆತಂಕದಿಂದ ಹೇಳಿದ್ದಾರೆ.