ವಾಷಿಂಗ್ ಟನ್: ಅಮೆರಿಕದಲ್ಲಿ ಅಕ್ಟೋಬರ್ ತಿಂಗಳನ್ನು ಹಿಂದೂ ಪಾರಂಪರಿಕ ಮಾಸವನ್ನಾಗಿ ಆಚರಣೆ ಮಾಡಲಾಗುತ್ತಿದೆ.
ಅಮೆರಿಕದ 50 ರಾಜ್ಯಗಳ ಪೈಕಿ 20 ರಾಜ್ಯಗಳಲ್ಲಿ ಹಾಗೂ 40 ಕ್ಕೂ ಹೆಚ್ಚು ನಗರಗಳಲ್ಲಿ ಈ ಬಗ್ಗೆ ಘೋಷಣೆಯನ್ನು ಮಾಡಲಾಗಿದೆ ಎಂದು ಸಮುದಾಯದ ನಾಯಕರು ತಿಳಿಸಿದ್ದಾರೆ.
ಈ ನಿಟ್ಟಿನಲ್ಲಿ ಹಿಂದೂ ಸಂಘಟನೆಗಳ ಮೊದಲ ಹೆಜ್ಜೆಯನ್ನು ಚುನಾಯಿತ ಪ್ರತಿನಿಧಿಗಳು ಸ್ವಾಗತಿಸಿದ್ದು, ಅಮೆರಿಕಾದಲ್ಲಿ ಅಲ್ಪಸಂಖ್ಯಾತ ಸಮುದಾಯವಾಗಿರುವ ಹಿಂದೂ ಸಮುದಾಯದ ಕೊಡುಗೆಗಳನ್ನು ಗುರುತಿಸುವ ನಿಟ್ಟಿನಲ್ಲಿ ಅಕ್ಟೋಬರ್ ತಿಂಗಳನ್ನು ಹಿಂದೂ ಪಾರಂಪರಿಕ ಮಾಸ ಎಂಬ ಘೋಷಣೆಯನ್ನು ಅಧಿಕೃತಗೊಳಿಸುವ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಜಾಗತಿಕ ಮಟ್ಟದಲ್ಲಿ ಹಿಂದೂಗಳು ಅಕ್ಟೋಬರ್ ತಿಂಗಳ ಆಸುಪಾಸಿನಲ್ಲಿ ನವರಾತ್ರಿ, ದಸರಾ, ದುರ್ಗಾ ಪೂಜೆ, ದೀಪಾವಳಿ ಹಬ್ಬಗಳನ್ನು ಆಚರಿಸುತ್ತಾರೆ. ಆದ್ದರಿಂದ ಅಮೆರಿಕದ ಹಿಂದೂ ಸಂಘಟನೆಗಳು ಅಕ್ಟೋಬರ್ ತಿಂಗಳನ್ನು ಹಿಂದೂಗಳ ಪಾರಂಪರಿಕ ಮಾಸವನ್ನಾಗಿ ಆಚರಿಸಲು ನಿರ್ಧರಿಸಿವೆ.