HEALTH TIPS

ದೀಪಾವಳಿ ಹಬ್ಬಕ್ಕಾಗಿ ಆನ್‌ಲೈನ್ ಶಾಪಿಂಗ್‌: ಕೇಂದ್ರದಿಂದ ಹೊಸ ಸಲಹೆ ಬಿಡುಗಡೆ!

                ನವದೆಹಲಿ: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಮೊದಲಿನಂತಿಲ್ಲ. ಹೊಸ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದ್ದಂತೆ ಸಾರ್ವಜನಿಕರು ಯಾವುದೇ ಕಾರಣಕ್ಕೂ ಮೈಮರೆಯುವಂತಿಲ್ಲ ಎಂದು ಕೇಂದ್ರ ಸರ್ಕಾರ ಎಚ್ಚರಿಸಿದೆ.

               ದೇಶದಲ್ಲಿ ದೀಪಾವಳಿ ಸೇರಿದಂತೆ ಮುಂಬರುವ ಪ್ರಮುಖ ಹಬ್ಬಗಳಲ್ಲಿ ಕೊವಿಡ್-19 ನಿಯಮಗಳನ್ನು ಪಾಲನೆ ಆಗುವಂತೆ ನೋಡಿಕೊಳ್ಳಲು ಕೇಂದ್ರ ಸರ್ಕಾರ ಸಲಹೆಗಳನ್ನು ನೀಡಿದೆ. ಅಂಗಡಿಗಳಿಗೆ ಹೋಗುವುದಕ್ಕಿಂತ ಆನ್‌ಲೈನ್ ಶಾಪಿಂಗ್ ಅನ್ನು ಉತ್ತೇಜಿಸುವಂತಹ ಕ್ರಮಗಳನ್ನು ಪಟ್ಟಿ ಮಾಡುವುದು.

           ಕೊವಿಡ್-19 ಸೋಂಕು ಹೆಚ್ಚಾಗಿರುವ ರಾಷ್ಟ್ರಗಳಿಗೆ ಅನಗತ್ಯ ಪ್ರಯಾಣ ಮಾಡುವಂತಿಲ್ಲ. ಆ ಮೂಲಕ ಸೋಂಕು ಹರಡುವಿಕೆ ಪ್ರಮಾಣವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಕೆಲವು ಪ್ರಮುಖ ಸಲಹೆಗಳನ್ನು ನೀಡಿದೆ. ದೇಶದಲ್ಲಿ ಮುಂಬರುವ ಹಬ್ಬಗಳ ಆಚರಣೆಗೆ ಕೇಂದ್ರ             ಸರ್ಕಾರ ಹೊರಡಿಸಿರುವ ಸಲಹೆಗಳ ಪಟ್ಟಿ ಇಲ್ಲಿದೆ ಓದಿ.

                          ಮುಂಬರುವ ಹಬ್ಬಕ್ಕಾಗಿ ಕೇಂದ್ರ ಸರ್ಕಾರದ ಸಲಹೆಗಳು:

* ಆನ್‌ಲೈನ್ ಶಾಪಿಂಗ್‌ನ ರೀತಿಯಲ್ಲಿ ಹಬ್ಬವನ್ನು ಆಚರಿಸುವುದಕ್ಕೆ ಉತ್ತೇಜನ ನೀಡುವುದು

* ಕೊವಿಡ್-19 ಹೆಚ್ಚಾಗುವ ಆತಂಕದ ಹಿನ್ನೆಲೆ ಅನಗತ್ಯ ಪ್ರಯಾಣಕ್ಕೆ ಕಡಿವಾಣ ಹಾಕುವುದು

* ಹಬ್ಬದ ಆಚರಣೆಗಳ ನಡುವೆಯೂ ಕೊವಿಡ್-19 ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವುದು

* ಶೇ.5ರಷ್ಟು ಕೊರೊನಾವೈರಸ್ ಪಾಸಿಟಿವಿಟಿಯನ್ನು ಹೊಂದಿರುವ ಕಂಟೇನ್ಮೆಂಟ್ ವಲಯಗಳು ಮತ್ತು ಜಿಲ್ಲೆಗಳಲ್ಲಿ ಯಾವುದೇ ಸಾಮೂಹಿಕ ಕೂಟಗಳನ್ನು ಆಯೋಜಿಸುವಂತಿಲ್ಲ

* ರಾಜ್ಯ ಸರ್ಕಾರಗಳು ಸಮರ್ಪಕವಾಗಿ ಮುಂಚಿತವಾಗಿಯೇ ನಿರ್ದೇಶನ ನೀಡಬೇಕು

* ಮೊದಲೇ ಅನುಮತಿ ಪಡೆದಿರುವ ಕಾರ್ಯಕ್ರಮಗಳಿಗೆ ಸೀಮಿತ ಜನಸಂಖ್ಯೆ ಹಾಗೂ ಮೇಲ್ವಿಚಾರಣೆಯೊಂದಿಗೆ ಅನುಮತಿ ನೀಡಲಾಗುವುದು

* ಮಾಲ್‌ಗಳು, ಸ್ಥಳೀಯ ಮಾರುಕಟ್ಟೆಗಳು ಮತ್ತು ಧಾರ್ಮಿಕ ಕೇಂದ್ರಗಳಲ್ಲಿ ಹಾಗೂ ಪೂಜಾ ಸ್ಥಳಗಳಲ್ಲಿ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು

* ಕೊವಿಡ್-19 ನಿರ್ವಹಣೆಯ ಐದು ಪ್ರಮುಖ ಅಂಶಗಳನ್ನು ಇಲ್ಲಿ ಗಮನದಲ್ಲಿ ಇಟ್ಟುಕೊಳ್ಳಬೇಕು: ಪರೀಕ್ಷೆ, ಹುಡುಕಾಟ, ಚಿಕಿತ್ಸೆ, ಲಸಿಕೆ ಮತ್ತು ಕೋವಿಡ್ ನಿಯಮಗಳ ಪಾಲನೆ ಬಗ್ಗೆ ಲಕ್ಷ್ಯ ವಹಿಸುವುದು

* ಆಯಾ ರಾಜ್ಯಗಳಲ್ಲಿ ಜಿಲ್ಲಾಧಿಕಾರಿಗಳು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸುವುದು ಅತ್ಯಗತ್ಯ

                                  ದೀಪಾವಳಿ ವೇಳೆಗೆ ಭಾರತದಲ್ಲಿ ಮೂರನೇ ಅಲೆ:

          ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ಯಾವಾಗ ಬರುತ್ತದೆಯೋ ಎಂಬ ಆತಂಕ ಇನ್ನೂ ಹೋಗಿಲ್ಲ. ಸೆಪ್ಟೆಂಬರ್ ಅಂತ್ಯದ ವೇಳೆಗೆ ದೇಶದಲ್ಲಿ ಕೊವಿಡ್-19 ಮೂರನೇ ಅಲೆ ಶುರವಾಗಲಿದೆ ಎಂದು ಸಾಂಕ್ರಾಮಿಕ ರೋಗಶಾಸ್ತ್ರಜ್ಞರು ಈ ಹಿಂದೆ ಎಚ್ಚರಿಕೆ ನೀಡಿದ್ದರು. ಮಕ್ಕಳ ಆರೋಗ್ಯದ ಮೇಲೆ ಹೆಚ್ಚಿನ ಲಕ್ಷ್ಯ ವಹಿಸಬೇಕು. ಮೂರನೇ ಅಲೆಯಿಂದ ಮಕ್ಕಳಿಗೆ ಹೆಚ್ಚಿನ ಅಪಾಯವಾಗಲಿದೆ ಎಂಬ ಆತಂಕವೂ ಇತ್ತು. ಆದರೆ ಸಮರೋಪಾದಿಯಲ್ಲಿ ಲಸಿಕೆ ವಿತರಣೆ ಅಭಿಯಾನವನ್ನು ನಡೆಸಿರುವುದು ಸೋಂಕು ಹರಡುವಿಕೆ ಮೇಲೆ ಕೊಂಚ ಕಡಿವಾಣ ಹಾಕಿತು. ಇದರ ಮಧ್ಯೆ ಎದುರಾಗಿರುವ ದೊಡ್ಡ ಹಬ್ಬಗಳಲ್ಲಿ ಸಾರ್ವಜನಿಕರು ಕೊವಿಡ್-19 ನಿಯಮಗಳನ್ನು ಮಾರ್ಗಸೂಚಿಗಳನ್ನು ಮರೆತು ನಡೆದುಕೊಂಡರೆ ಅಪಾಯ ತಪ್ಪಿದ್ದಲ್ಲ ಎಂದು ತಜ್ಞರು ಎಚ್ಚರಿಸಿದ್ದಾರೆ. ಈ ಹಿನ್ನೆಲೆ ಕೇಂದ್ರ ಸರ್ಕಾರವು ಹಬ್ಬಗಳ ಸಂದರ್ಭದಲ್ಲಿ ಯಾವ ರೀತಿ ನಿಯಮಗಳನ್ನು ಪಾಲನೆ ಮಾಡಬೇಕು ಎಂಬ ಸಲಹೆಗಳನ್ನು ಬಿಡುಗಡೆ ಮಾಡಿದೆ.

                            100 ಕೋಟಿ ಡೋಸ್ ಲಸಿಕೆ ವಿತರಣೆ ಮಾಹಿತಿ

         ಭಾರತದಲ್ಲಿ ಕೊವಿಡ್-19 ಲಸಿಕೆ ವಿತರಣೆ ಪ್ರಕ್ರಿಯೆ ಆರಂಭವಾಗಿ 9 ತಿಂಗಳಿನಲ್ಲಿ 100 ಕೋಟಿ ಡೋಸ್ ಲಸಿಕೆಯನ್ನು ವಿತರಿಸುವ ಮೂಲಕ ಜಗತ್ತಿನಲ್ಲಿ 100 ಕೋಟಿ ಡೋಸ್ ಲಸಿಕೆ ನೀಡಿದ ಎರಡನೇ ರಾಷ್ಟ್ರವಾಗಿ ಗುರುತಿಸಿಕೊಂಡಿದೆ. ದೇಶದಲ್ಲಿ 279 ದಿನಗಳಲ್ಲಿ 1,00,53,63,691 ಡೋಸ್ ಕೊರೊನಾವೈರಸ್ ಲಸಿಕೆಯನ್ನು ವಿತರಿಸಲಾಗಿದೆ. ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ ಉತ್ತರ ಪ್ರದೇಶ ಅಗ್ರಸ್ಥಾನದಲ್ಲಿ ಗುರುತಿಸಿಕೊಂಡಿದೆ. ಇದರ ನಂತರ ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಗುಜರಾತ್ ಮತ್ತು ಮಧ್ಯಪ್ರದೇಶ ರಾಜ್ಯಗಳು ಅತಿಹೆಚ್ಚು ಲಸಿಕೆ ವಿತರಿಸಿದ ದೇಶದ ಟಾಪ್-5 ಪಟ್ಟಿಯಲ್ಲಿ ಕಾಣಿಸಿಕೊಂಡಿವೆ.

                                           ದೇಶದಲ್ಲಿ ಹೇಗಿದೆ ಕೊರೊನಾವೈರಸ್ ಚಿತ್ರಣ?:

                ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಏರಿಳಿತ ವಾರದಿಂದ ವಾರಕ್ಕೆ ಬದಲಾಗುತ್ತಾ ಸಾಗಿದೆ. ಕಳೆದ 24 ಗಂಟೆಗಳಲ್ಲಿ 16,326 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 17,677 ಸೋಂಕಿತರು ಗುಣಮುಖರಾಗಿದ್ದು, ದೇಶದಲ್ಲಿ ಒಟ್ಟು ಗುಣಮುಖರ ಸಂಖ್ಯೆ 3,35,32,126ಕ್ಕೆ ಏರಿಕೆಯಾಗಿದೆ. ಒಂದೇ ದಿನ ಭಾರತದಲ್ಲಿ 666 ಮಂದಿ ಕೊವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ 1,73,728 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries