HEALTH TIPS

ಪುಲ್ಲೂರು-ಪೆರಿಯ ಗ್ರಾಮ ಪಂಚಾಯತ್ ನಲ್ಲಿ "ಶಿಕ್ಷಕಿ ಮತ್ತು ಮಕ್ಕಳು" ಯೋಜನೆ ಆರಂಭ

                  ಕಾಸರಗೋಡು: ಹರಿತ ಕೇರಳಂ ಮಿಷನ್ ಆಶ್ರಯದಲ್ಲಿ ಹರಿತ ಕ್ರಿಯಾ ಸೇನೆ ಮೂಲಕ ವಿದ್ಯಾರ್ಥಿಗಳಿಗಾಗಿ ಜಾರಿಗೊಳಿಸುವ "ಶಿಕ್ಷಕಿ ಮತ್ತು ಮಕ್ಕಳು" ಯೋಜನೆ ಪುಲ್ಲೂರು-ಪೆರಿಯ ಗ್ರಾಮ ಪಂಚಾಯತ್ ನಲ್ಲಿ ಆರಂಭಗೊಂಡಿದೆ. 

            ತ್ಯಾಜ್ಯ ಸಂಸ್ಕರಣೆ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ಈ ಯೋಜನೆ ಜಾರಿಗೊಳಿಸಲಾಗುತ್ತಿದೆ. ಜಿಲ್ಲೆಯ ಸ್ಥಳೀಯಾಡಳಿತ ಸಂಸ್ಥೆಗಳ ಪ್ರತಿ ವಾರ್ಡ್ ನಲ್ಲೂ ಹರಿತ ಕ್ರೀಯಾ ಸೇಬೆ ಸದಸ್ಯರು ಆಯಾ ವಾರ್ಡಿನ ಮಕ್ಕಲಿಗೆ ವಿವಿಧ ರೀತಿಯ ಪ್ಲಾಸ್ಟಿಕ್ ಗಳ ಬಗ್ಗೆ ಮಾಹಿತಿ ನೀಡಿ, ಅವುಗಳನ್ನು ವಿಂಗಡಿಸಿ ಸಂಗ್ರಹಿಸುವ ಬಗೆಗಿನ ತರಬೇತಿ ನೀಡುವರು. 

            ಪುಲ್ಲೂರು-ಪೆರಿಯ ಗ್ರಾಮ ಪಂಚಾಯತ್ ಕಚೇರಿ ಆವರಣದಲ್ಲಿ ಈ ಸಂಬಂಧ ಜರುಗಿದ ಸಮಾರಂಭದಲ್ಲಿ ಕಾಞಂಗಾಡು ಡಿ.ವೈ.ಎಸ್.ಪಿ. ಡಾ.ವಿ.ಬಾಲಕೃಷ್ಣನ್ ಯೋಜನೆ ಉದ್ಘಾಟಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷ ಸಿ.ಕೆ.ಅರವಿಂದಾಕ್ಷನ್ ಅಧ್ಯಕ್ಷತೆ ವಹಿಸಿದ್ದರು. ಹರಿತ ಕೇರಳಂ ಮಿಷನ್ ಜಿಲ್ಲಾ ಸಂಚಾಲಕ ಎಂ.ಪಿ.ಸುಬ್ರಹ್ಮಣ್ಯನ್ ಯೋಜನೆ ಬಗ್ಗೆ ಮಾಹಿತಿ ನೀಡಿದರು. ಅನೇಕ ಗಣ್ಯರು ಉಪಸ್ಥಿತರಿದ್ದರು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries