ಕಾಸರಗೋಡು: ಪಳ್ಳಿಕ್ಕರೆ ಗ್ರಾಮ ಪಂಚಾಯತ್ ನಲ್ಲಿ "ಶಿಕ್ಷಕಿ ಮತ್ತು ಮಕ್ಕಳು" ಯೋಜನೆ ಉದ್ಘಾಟನೆಗೊಂಡಿದೆ. ಎಸ್.ಎಂ.ಎ.ಯು.ಪಿ.ಶಾಲಾ ಆವರಣದಲ್ಲಿ ಜರುಗಿದ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಎಂ.ಕುಮಾರನ್ ಉದ್ಘಾಟಿಸಿದರು. ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷ ಎ.ಮಣಿಕಂಠನ್ ಅಧ್ಯಕ್ಷತೆ ವಹಿಸಿದ್ದರು. ಅನೇಕ ಗಣ್ಯರು ಉಪಸ್ಥಿತರಿದ್ದರು.