ಉಪ್ಪಳ: ಬಿಜೆಪಿ ಮಂಜೇಶ್ವರ ಮಂಡಲ ಸಮಿತಿ ವತಿಯಿಂದ ಗಾಂಧಿ ಜಯಂತಿ ಅಂಗವಾಗಿ ತಿರಂಗಾ ಯಾತ್ರೆ, ಸ್ವಾತಂತ್ರ್ಯ ಹೋರಾಟಗಾರ ಗಾಂಧಿ ಪ್ರತಿಪಾದಕ ಮಂಗಲ್ಪಾಡಿ ಕುಬಣೂರು ದಿ.ಪಕೀರ ಶೆಟ್ಟಿ ಯವರ ಮನೆಯಿಂದ ಹೊರಟು ಕೈಕಂಬ ದಲ್ಲಿ ಸಮಾಪನಗೊಂಡಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಜೇಶ್ವರ ಮಂಡಲ ಅಧ್ಯಕ್ಷ ಮಣಿಕಂಠ ರೈ ಪಟ್ಲ ವಹಿಸಿದ್ದರು. ಬಿಜೆಪಿ ರಾಜ್ಯ ಸಮಿತಿ ಸದಸ್ಯ ನ್ಯಾಯವಾದಿ. ಬಾಲಕೃಷ್ಣ ಶೆಟ್ಟಿ ಉದ್ಘಾಟಿಸಿದರು. ಸಮಾರೋಪದಲ್ಲಿ ಉತ್ತರ ವಲಯ ಉಪಾಧ್ಯಕ್ಷ ಕೋಳಾರು ಸತೀಶ್ ಚಂದ್ರ ಭಂಡಾರಿ ಮಾತನಾಡಿದರು. ಕಾರ್ಯಕ್ರಮ ದಲ್ಲಿ ರಾಜ್ಯ ಸಮಿತಿ ಸದಸ್ಯ ಸುರೇಶ್ ಕುಮಾರ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಪುಷ್ಪಾ ಅಮೆಕ್ಕಳ, ರಾಜ್ಯ ಕೌನ್ಸಿಲ್ ಸದಸ್ಯೆ ಸರೋಜ ಆರ್.ಬಲ್ಲಾಳ್, ಯಸ್ ಸಿ ಮೋರ್ಚಾ ಉಪಾಧ್ಯಕ್ಷ ಎ ಕೆ ಕಯ್ಯಾರ್, ಓ ಬಿ ಸಿ ಮೋರ್ಚಾ ರಾಜ್ಯ ಕೋಶಾಧಿಕಾರಿ ನ್ಯಾಯವಾದಿ. ನವೀನ್ ರಾಜ್, ಮಹಿಳಾ ಮೋರ್ಚಾ ರಾಷ್ಟ್ರೀಯ ಸಮಿತಿ ಸದಸ್ಯೆ ಅಶ್ವಿನಿ ಪಜ್ವ, ಮಹಿಳಾ ಮೋರ್ಚಾ ಮಂಡಲ ಅಧ್ಯಕ್ಷೆ ಮಮತಾ ಕುಲಾಲ್, ಒಬಿಸಿ ಮೋರ್ಚಾ ಮಂಡಲ ಕಾರ್ಯದರ್ಶಿ ಕೆ ಪಿ ಅನಿಲ್ ಕುಮಾರ್, ಮಂಡಲ ಪ್ರಧಾನ ಕಾರ್ಯದರ್ಶಿ ಆದರ್ಶ್ ಮಂಜೇಶ್ವರ, ಜಿಲ್ಲಾ ಸಮಿತಿ ಸದಸ್ಯ ಹರಿಶ್ಚಂದ್ರ ಮಂಜೇಶ್ವರ, ಜಿಲ್ಲಾ ಪಂಚಾಯತಿ ಸದಸ್ಯ ನಾರಾಯಣ ನಾಯ್ಕ್, ಸಂತೋಷ್ ದೈಗೋಳಿ, ಜಿಲ್ಲಾ ಕಾರ್ಯದರ್ಶಿ ವಿಜಯ್ ಕುಮಾರ್ ರೈ,ಮಂಡಲ ಉಪಾಧ್ಯಕ್ಷ ಬಾಬು ಮಾಸ್ತರ್, ಒಬಿಸಿ ಮೋರ್ಚಾ ಮಂಡಲಾಧ್ಯಕ್ಷ ಚಂದ್ರಹಾಸ ಕಡಂಬಾರ್, ಬಿಜೆಪಿ ಉಪಾಧ್ಯಕ್ಷೆ ಜಯಂತಿ ಶೆಟ್ಟಿ, ಕಾರ್ಯದರ್ಶಿ ಪುಷ್ಪ ಕನಿಯಾಲ, ವಿವಿಧ ಪಂಚಾಯತಿಗಳ ಅಧ್ಯಕ್ಷರು ಗಳು ಜನಪ್ರತಿನಿದಿಗಳು ಮೊದಲಾದವರು ಭಾಗವಹಿಸಿದ್ದರು.
ದಿ.ಪಕೀರ ಶೆಟ್ಟಿ ಯವರ ಪುತ್ರ ಬಾಲಕೃಷ್ಣ ಶೆಟ್ಟಿ ಅವರು ಮಂಡಲ ಅಧ್ಯಕ್ಷರಿಗೆ ರಾಷ್ಟ್ರ ಧ್ವಜ ಹಸ್ತಾಂತರ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಿಜೆಪಿ ಮಂಗಲ್ಪಾಡಿ ಪಂಚಾಯತಿ ಅಧ್ಯಕ್ಷ ವಸಂತ್ ಕುಮಾರ್ ಮಯ್ಯ ಸ್ವಾಗತಿಸಿ, ಮಂಡಲ ಕಾರ್ಯದರ್ಶಿ ರಮೇಶ್ ಭಟ್ ವಂದಿಸಿದರು.