ನವದೆಹಲಿ: ಕಾಶ್ಮೀರ ಕಣಿವೆಯಲ್ಲಿ ಭಯೋತ್ಪಾದನೆ ವಿರುದ್ಧ 'ಘನ ಉಪಕ್ರಮ'ದ ಅಗತ್ಯತೆಯಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಹುತಾತ್ಮರಾದ ಐವರು ಯೋಧರ ಗೌರವಾರ್ಥ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ಎನ್‌ಕೌಂಟರ್‌ನಲ್ಲಿ ಹುತಾತ್ಮರಾದ ವೀರ ಯೋಧರಿಗೆ ಗೌರವ. ಕಾಶ್ಮೀರ ಕಣಿವೆಯಲ್ಲಿ ಭಯೋತ್ಪಾದನೆ ವಿರುದ್ಧ ಕಠಿಣ ಉಪಕ್ರಮದ ಅಗತ್ಯವಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಜೂನಿಯರ್ ಕಮಿಷನ್ಡ್ ಆಫೀಸರ್(ಜೆಸಿಒ) ಸೇರಿದಂತೆ ಐವರು ಸೇನಾ ಸಿಬ್ಬಂದಿಗಳು ಪೂಂಚ್‌ನಲ್ಲಿ ನಡೆದ ಉಗ್ರರ ವಿರೋಧಿ ಕಾರ್ಯಾಚರಣೆಯಲ್ಲಿ ಭಯೋತ್ಪಾದಕರೊಂದಿಗೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.