ಬದಿಯಡ್ಕ: ಪೆರಡಾಲ ನವಜೀವನ ಶಾಲಾ ಶಿಕ್ಷಕಿ ಸುಶೀಲ ಕೆ.ಪದ್ಯಾಣ ಅವರಿಗೆ ತ್ರಿವೇಣಿ ಸಾಹಿತ್ಯ ಪ್ರಶಸ್ತಿ ಲಭಿಸಿದೆ. ಅವರ ಸಾಹಿತ್ಯ ಸೇವೆಯನ್ನು ಗುರುತಿಸಿ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಬೆಂಗಳೂರು ಇದರ ವಿಜಯಪುರ ಜಿಲ್ಲಾ ಘಟಕದ ನೇತೃತ್ವದಲ್ಲಿ ನಡೆದ ಅಖಿಲ ಕರ್ನಾಟಕ ತೃತೀಯ ಕವಿ ಕಾವ್ಯ ಸಮ್ಮೇಳನ 2021ರಲ್ಲಿ ಪ್ರಶಸ್ತಿಯನ್ನು ನೀಡಲಾಯಿತು.
ಹೂವಿನ ಹಿಪ್ಪರಗಿ ಬಸವನ ಬಾಗೇವಾಡಿ ವಿಶ್ವಚೇತನ ಪ್ರೌಢಶಾಲಾ ಆವರಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಸಮ್ಮೇಳನಾಧ್ಯಕ್ಷೆ ಡಾ. ವಸುಂಧರಾ ಭೂಪತಿ ಪ್ರಶಸ್ತಿಯನ್ನು ನೀಡಿದರು. ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆಗೈದ 9 ಮಂದಿಯನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು.