ಕುಂಬಳೆ: ಬಾಂಗ್ಲಾದೇಶದಲ್ಲಿ ಹಿಂದೂ ದೇವಾಲಯ ಹಾಗೂ ಹಿಂದೂ ಮನೆಗಳ ದ್ವಂಸವನ್ನು ಖಂಡಿಸಿ ಬುಧವಾರ ಸಂಜೆ ಕುಂಬಳೆ ಪೇಟೆಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಕುಂಬಳೆ ವ್ಯಾಯಾಮ ಶಾಲೆಯಿಂದ ಹೊರಟ ಮೆರವಣಿಗೆ ಪೇಟೆಯಲ್ಲಿ ಸಾಗಿತು. ಧಾರ್ಮಿಕ ಮುಂದಾಳು, ಬಿಜೆಪಿ ಜಿಲ್ಲಾಧ್ಯಕ್ಷ ಕುಂಟಾರು ರವೀಶ ತಂತ್ರಿ ಪ್ರಮುಖ ಭಾಷಣ ಮಾಡಿದರು.ವಿಹಿಂಪ ಜಿಲ್ಲಾಧ್ಯಕ್ಷÀ ಜಯದೇವ ಖಂಡಿಗೆ ಸ್ವಾಗತಿಸಿ, ಕಾರ್ಯದರ್ಶಿ ಶಂಕರ್ ಭಟ್ ಉಳುವಾನ ವಂದಿಸಿದರು.