ತಿರುವನಂತಪುರಂ: ಮಹಿಳೆಯರ ವಿರುದ್ಧದ ಸೈಬರ್ ದಾಳಿಯನ್ನು ಬಲವಾಗಿ ವಿರೋಧಿಸಲಾಗುವುದು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ಆನ್‍ಲೈನ್‍ನಲ್ಲಿ ಮಹಿಳೆಯರಿಗೆ ಕಿರುಕುಳ ನೀಡಲು ಪ್ರಯತ್ನಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದರು. ಮಹಿಳಾ ಭದ್ರತೆ ಕುರಿತು ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಮುಖ್ಯಮಂತ್ರಿ ಉತ್ತರಿಸುತ್ತಿದ್ದರು.
ಕೇರಳದಲ್ಲಿ ಮಹಿಳೆಯರು ಘನತೆಯಿಂದ ಬದುಕಲು ರಾಜ್ಯ ಸರ್ಕಾರ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಇದಕ್ಕೆ ರಾಜಕೀಯ ಪಕ್ಷಗಳ ಬೆಂಬಲ ಬೇಕು. ಪಾಲಾ ಘಟನೆ ಮರುಕಳಿಸದಂತೆ ಜಾಗೃತಿ ಮೂಡಿಸಬೇಕು ಎಂದು ಸಿಎಂ ಸೂಚಿಸಿದರು.
ರಾಜಕೀಯ ಪಕ್ಷಗಳು ಮತ್ತು ನಾಯಕರು ಮಹಿಳಾ ವಿರೋಧಿ ಚಟುವಟಿಕೆಗಳಿಂದ ದೂರವಿರಬೇಕು ಎಂದು ಪಿಣರಾಯಿ ವಿಜಯನ್ ಹೇಳಿದರು. ನಾಯಕರು ಸಾರ್ವಜನಿಕರಿಗೆ ತಪ್ಪು ಸಂದೇಶ ರವಾನಿಸಬಾರದು. ಹರಿತ ವಿಷಯದಲ್ಲಿ ಮುಸ್ಲಿಂ ಲೀಗ್ ನ್ನು ಪರೋಕ್ಷವಾಗಿ ಟೀಕಿಸುವಾಗ ಮುಖ್ಯಮಂತ್ರಿಗಳು ಇದನ್ನು ಹೇಳಿದರು.