ಕುಂಬಳೆ: ಗಾಂಧಿ ಜಯಂತಿ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ ಕಾಸರಗೋಡು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಜನಜಾಗೃತಿ ವೇದಿಕೆ ಕಾಸರಗೋಡು ಮತ್ತು ನವಜೀವನ ಸಮಿತಿ ಕಾಸರಗೋಡು ಜಿಲ್ಲೆ ಇದರ ಜಂಟಿ ಆಶ್ರಯದಲ್ಲಿ ಕಳತ್ತೂರು ಶ್ರೀ ಮಹಾದೇವ ಸಭಾ ಭವನದಲ್ಲಿ ಜರಗಿದ ಗಾಂಧಿ ಸೃತಿ ಮತ್ತು ನವಜೀವನೋತ್ಸವ ಕಾರ್ಯಕ್ರಮವನ್ನು ತೆಂಗಿನ ಹಿಂಗಾರ ಅರಳಿಸುವ ಮೂಲಕ ಶಾಸಕ ಎ ಕೆ ಎಂ ಅಶ್ರಫ್ ಉದ್ಘಾಟಿಸಿದರು.
ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ಅಶ್ವತ್ ಪೂಜಾರಿ ಲಾಲ್‍ಬಾಗ್ ಅಧ್ಯಕ್ಷತೆ ವಹಿಸಿದರು. ಕುಂಬಳೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಕೆ ವಿ ತಾಹಿರಾ ಯೂಸುಫ್, ಸದಸ್ಯೆ ಪುಷ್ಪಲತಾ ಬಿ.ಶೆಟ್ಟಿ ,ಕುಂಬಳೆ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ದಿವಾಕರ ರೈ, ಕಿದೂರು ಶ್ರೀ ಮಹಾದೇವ ದೇವಸ್ಥಾನದ ಆಡಳಿತ ಮೊಕ್ತೇಸರ ರಘುರಾಮ ರೈ, ಜಿಲ್ಲಾ ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಅರಿಬÉೈಲು ಗೋಪಾಲ ಶೆಟ್ಟಿ, ಜನಜಾಗೃತಿ ವೇದಿಕೆಯ ಕುಂಬಳೆ ವಲಯಾಧ್ಯಕ್ಷ ಮಂಜುನಾಥ ಆಳ್ವ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ದ.ಕ ಜಿಲ್ಲೆಯ ನಿರ್ದೇಶಕ ಪ್ರವೀಣ್ ಕುಮಾರ್ ಮತ್ತು ತಿಮ್ಮಯ್ಯ ನಾಯ್ಕ ಉಪಸ್ಥಿತರಿದ್ದರು.
ಸಮಾರಂಭದಲ್ಲಿ ಮದ್ಯಪಾನ ತ್ಯಜಿಸಿ ನವಜೀವನ ನಡೆಸುತ್ತಿರುವ ಆರು ಮಂದಿಗೆ ಜಾಗೃತಿ ಮಿತ್ರ ಪ್ರಶಸ್ತಿ ಮತ್ತು ಅಶಕ್ತರಿಗೆ ಆರ್ಥಿಕ ನೆರವು ನೀಡಲಾಯಿತು. ಮಹಾರಾಷ್ಟ್ರ ಕನ್ನಡಿಗರ ಸಂಘದ ಕೆ ಟಿ ವೇಣು ಗೋಪಾಲ್ ಮಾಧ್ಯಮ ಶ್ರೀ ಪ್ರಶಸ್ತಿಗೆ ಪಾತ್ರರಾದ ಹಿರಿಯ ಪತ್ರಕರ್ತ ಅಚ್ಯುತ ಚೇವಾರ್ ಅವರನ್ನು ಗೌರವಿಸಲಾಯಿತು.ಕಾಸರಗೋಡು ಜಿಲ್ಲಾ ಯೋಜನಾಧಿಕಾರಿ ಮುಕೇಶ್ ಸ್ವಾಗತಿಸಿ, ವಂದಿಸಿದರು.