ನವದೆಹಲಿ: ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಇತ್ತೀಚೆಗೆ ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಿದ್ದಕ್ಕೆ ಚೀನಾ ಆಕ್ಷೇಪ ವ್ಯಕ್ತಪಡಿಸಿತ್ತು. ಇದಕ್ಕೆ ತೀಕ್ಷಣವಾಗಿಯೇ ಪ್ರತಿಕ್ರಿಯಿಸಿರುವ ಭಾರತ, ನಮ್ಮ ನಮ್ಮ ನಾಯಕರು ಇತರೆ ರಾಜ್ಯಗಳಿಗೆ ಭೇಟಿ ನೀಡುವಂತೆ ಅರುಣಾಚಲ ಪ್ರದೇಶಕ್ಕೂ ಭೇಟಿ ನೀಡುತ್ತಾರೆ ಎಂದು ಬುಧವಾರ ಹೇಳಿದೆ.
ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅವಿಭಾಜ್ಯ ಅಂಗವಾಗಿದೆ. ಚೀನಾದ ಆಕ್ಷೇಪಕ್ಕೆ ಯಾವುದೇ ಮಹತ್ವ ಕೊಡಬೇಕಾಗಿಲ್ಲ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಾಮ್ ಬಾಗ್ಚಿ ಅವರು ಹೇಳಿದ್ದಾರೆ.
ವಾರಾಂತ್ಯದಲ್ಲಿ ಅರುಣಾಚಲ ಪ್ರದೇಶಕ್ಕೆ ವೆಂಕಯ್ಯ ನಾಯ್ಡು ಭೇಟಿ ನೀಡಿದ್ದನ್ನು ವಿರೋಧಿಸಿದ್ದ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರರ ಹೇಳಿಕೆಗೆ ಪ್ರತಿಕ್ರಿಯಿಸಿದ ಬಾಗ್ಚಿ, ಉಪ ರಾಷ್ಟ್ರಪತಿಗಳ ಭೇಟಿ ಬಗ್ಗೆ "ಚೀನಾದ ಅಧಿಕೃತ ವಕ್ತಾರರ ಟೀಕೆಗಳನ್ನು ನಾವು ಗಮನಿಸಿದ್ದೇವೆ. ನಾವು ಅಂತಹ ಟೀಕೆಗಳನ್ನು ತಿರಸ್ಕರಿಸುತ್ತೇವೆ. ಅರುಣಾಚಲ ಪ್ರದೇಶವು ಭಾರತದ ಅವಿಭಾಜ್ಯ ಅಂಗವಾಗಿದೆ". ಭಾರತದ ನಾಯಕರು ಇತರೆ ರಾಜ್ಯಗಳಿಗೆ ಭೇಟಿ ನೀಡಿದಂತೆ ಅರುಣಾಚಲ ಪ್ರದೇಶಕ್ಕೂ ಭೇಟಿ ನೀಡುತ್ತಲೇ ಇರುತ್ತಾರೆ ಎಂದಿದ್ದಾರೆ.
ಪೂರ್ವ ಲಡಾಖ್ ಸೇರಿದಂತೆ ಭಾರತ ಮತ್ತು ಚೀನಾ ಗಡಿ ಪ್ರದೇಶಗಳಲ್ಲಿ ಟೀನಾ ದುರುದ್ದೇಶದಿಂದ ಆಕ್ರಮಿಸುವ ಕೆಲಸ ಮಾಡುತ್ತಿದೆ. ಇದು ನಿಜಕ್ಕೂ ದ್ವಿಪಕ್ಷೀಯ ಒಪ್ಪಂದದ ಉಲ್ಲಂಘನೆಯಾಗಿದೆ ಎಂದು ಅರಿಂದಾಮ್ ಬಾಗ್ಚಿ ಹೇಳಿದ್ದಾರೆ.