ಮಂಜೇಶ್ವರ: ವರ್ಕಾಡಿ ದೇವಂದಪಡ್ಪು ಶ್ರೀಮಹಾವಿಷ್ಣು ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ನ.18 ರಂದು ಪಲಿಮಾರು ಶ್ರೀಗಳ ಉಪಸ್ಥಿತಿಯಲ್ಲಿ, ಬ್ರಹ್ಮಶ್ರೀ ವೇದವ್ಯಾಸ ತಂತ್ರಿಯವರ ನೇತೃತ್ವದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಅಂಗವಾಗಿ 17 ರಂದು ಸ|ಂಜೆ 5ಕ್ಕೆ ಸಾಮೂಹಿಕ ಶ್ರೀ ದುರ್ಗಾ ನಮಸ್ಕಾರ ಪೂಜೆ, ಪ್ರಾರ್ಥನೆ, ರಾತ್ರಿ 8ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ.
ನ.18 ರಂದು ಬೆಳಿಗ್ಗೆ 8 ಕ್ಕೆ ಗಣಹೋಮ, ಮನ್ಯುಸೂಕ್ತ ಹೋಮ, ವಿಷ್ಣು ಸಹಸ್ರನಾಮ ಹೋಮ, ವಾಯುಸ್ತುತಿ, ಪುರ|ಶ್ಚರಣ, ವಿಷ್ಣು ಗಾಯತ್ರಿ ಹೋಮ ನಡೆಯಲಿದೆ. ಮಧ್ಯಾಹ್ನ 11.30ಕ್ಕೆ ಉಡುಪಿ ಪಲಿಮಾರು ಮಠದ ಪಟ್ಟದ ದೇವರಿಗೆ ಮಹಾಪೂಜೆ, ಮಧ್ಯಾಹ್ನ 12ಕ್ಕೆ ಮಹಾಪೂಜೆ, ಬಲಿ, ಪ್ರಸಾದ ವಿತರಣೆ, 12.30ಕ್ಕೆ ಪಲಿಮಾರು ಮಠಾಧೀಶ ಶ್ರೀವಿದ್ಯಾದೀಶ ತೀರ್ಥ ಪಾದಂಗಳವರಿಂದ ಪ್ರವಚನ, 1ಕ್ಕೆ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ 7 ಕ್ಕೆ ಹೂವಿನ ಪೂಜೆ, ರಂಗಪೂಜೆ, ರಾತ್ರಿ 8 ಕ್ಕೆ ಶ್ರೀದೇವರ ಉತ್ಸವ ಬಲಿ, ಪ್ರಸಾದ ವಿತರಣೆ ನಡೆಯಲಿದೆ. ರಾತ್ರಿ 9 ರಿಂದ ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ವಿಠಲ ನಾಯಕ್ ಕಲ್ಲಡ್ಕ ಅವರಿಂದ ಗೀತ ಸಾಹಿತ್ಯ ಸಂಭ್ರಮ ನಡೆಯಲಿದೆ.