HEALTH TIPS

ಕಣಿವೆ ಪ್ರದೇಶದಲ್ಲಿ ಭದ್ರತೆ ಪರಾಮರ್ಶೆ: ಜಮ್ಮು-ಕಾಶ್ಮೀರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದಿನಿಂದ ಮೂರು ದಿನಗಳ ಪ್ರವಾಸ

        ಶ್ರೀನಗರ: ಕಣಿವೆ ಪ್ರದೇಶದ ಭದ್ರತಾ ಪರಿಸ್ಥಿತಿಯನ್ನು ಪರಾಮರ್ಶಿಸಲು ಮೂರು ದಿನಗಳ ಪ್ರವಾಸಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಜಮ್ಮು-ಕಾಶ್ಮೀರದ ಶ್ರೀನಗರಕ್ಕೆ ಭೇಟಿ ನೀಡುತ್ತಿದ್ದಾರೆ. ಈ ಸಂದರ್ಭದಲ್ಲಿ ತೀವ್ರ ಭದ್ರತೆ ಕಲ್ಪಿಸಲಾಗಿದೆ. ಉಗ್ರರಿಂದ ಇತ್ತೀಚೆಗೆ ನಾಗರಿಕರ ಹತ್ಯೆ ಮತ್ತು ಹೆಚ್ಚಿನ ಉಪಟಳ, ಕಣಿವೆ ಪ್ರದೇಶದಲ್ಲಿ ಬೆಳವಣಿಗೆಗಳ ಬಗ್ಗೆ ಪರಾಮರ್ಶೆ ನಡೆಸಲು ಈ ಭೇಟಿ ಕೈಗೊಳ್ಳುತ್ತಿದ್ದಾರೆ.

       2019ರ ಆಗಸ್ಟ್ 5ರಂದು ಪೂರ್ವ ವಲಯ ರಾಜ್ಯಗಳನ್ನು ವಿಭಜನೆ ಮಾಡಿ ಸಂವಿಧಾನ ವಿಧಿ 370 ಮತ್ತು 35ಎ ತೆಗೆದುಹಾಕಿದ ನಂತರ ಅಮಿತ್ ಶಾ ಅವರ ಮೊದಲ ಜಮ್ಮು-ಕಾಶ್ಮೀರ ಭೇಟಿಯಾಗಿದ್ದು ತೀವ್ರ ಕುತೂಹಲ ಕೆರಳಿದೆ. 

       ಕೇಂದ್ರ ಗೃಹ ಸಚಿವರ ಭೇಟಿ ಸಂದರ್ಭದಲ್ಲಿ ತೀವ್ರ ಭದ್ರತೆ ಕಲ್ಪಿಸಲಾಗಿದೆ. ಭದ್ರತೆ ವಿಚಾರವಾಗಿ ತಾತ್ಕಾಲಿಕ ಚೆಕ್ ಪಾಯಿಂಟ್ ಗಳನ್ನು ಮತ್ತು ಹೊಸ ಬಂಕರ್ ಗಳನ್ನು ಶ್ರೀನಗರ ಮತ್ತು ಕಣಿವೆ ಪ್ರದೇಶದ ಬೇರೆ ಕಡೆಗಳಲ್ಲಿ ರಚಿಸಲಾಗಿದೆ. 1990ರ ದಶಕದಲ್ಲಿ ಇಲ್ಲಿ ಭಯೋತ್ಪಾದಕ ಚಟುವಟಿಕೆಗಳು ಹೆಚ್ಚಾದ ಮೇಲೆ ಮಹಿಳಾ ಸಿಆರ್ ಪಿಎಫ್ ಸಿಬ್ಬಂದಿಯನ್ನು ಲಾಲ್ ಚೌಕ್ ನ ನಗರ ಕೇಂದ್ರದಲ್ಲಿ ನಿಯೋಜಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಕೆಲವು ಭಾಗಗಳಲ್ಲಿ ಇಂಟರ್ನೆಟ್ ಸಂಪರ್ಕವನ್ನು ತೆಗೆದುಹಾಕಲಾಗಿದೆ. 
ದಾಲ್ ಸರೋವರದ ತೀರದ ಬೌಲೆವರ್ಡ್ ರಸ್ತೆಯನ್ನು ಸಾರ್ವಜನಿಕ ಓಡಾಟಕ್ಕೆ ಇಂದಿನಿಂದ ನಾಡಿದ್ದು 25ರವರೆಗೆ ನಿಷೇಧಿಸಲಾಗಿದೆ. ಬದಲಿ ಮಾರ್ಗಗಗಳನ್ನು ಬಳಸಲು ಜನರಿಗೆ ಸೂಚಿಸಲಾಗಿದೆ. 

       ಕಾಶ್ಮೀರ ಕಣಿವೆಯಲ್ಲಿ ಇತ್ತೀಚೆಗೆ ವಲಸೆ ಕಾರ್ಮಿಕರು ಮತ್ತು ಅಲ್ಪಸಂಖ್ಯಾತ ಸಮುದಾಯದ ಸದಸ್ಯರನ್ನು ಗುರಿಯಾಗಿಸಿಕೊಂಡು ಹತ್ಯೆಯಾದ ಹಿನ್ನೆಲೆಯಲ್ಲಿ ಅಮಿತ್ ಶಾ ಈ  ಭೇಟಿ ನೀಡುತ್ತಿದ್ದಾರೆ. ಐವರು ವಲಸೆ ಕಾರ್ಮಿಕರು, ಮೂವರು ಅಲ್ಪಸಂಖ್ಯಾತ ಸಮುದಾಯದವರು ಮತ್ತು ನಾಲ್ವರು ಸ್ಥಳೀಯರು ಸೇರಿದಂತೆ ಕನಿಷ್ಠ 12 ನಾಗರಿಕರು ಈ ತಿಂಗಳು ಭಯೋತ್ಪಾದಕರ ಗುಂಡಿಗೆ ಬಲಿಯಾಗಿದ್ದಾರೆ. ಅಮಿತ್ ಶಾ ಅವರು ಉನ್ನತ ನಾಗರಿಕ ಮತ್ತು ಭದ್ರತಾ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಉನ್ನತ ಗೃಹ ಇಲಾಖೆಯ ಅಧಿಕಾರಿಗಳು ಶಾ ಅವರ ಜೊತೆ ಶ್ರೀನಗರಕ್ಕೆ ಭೇಟಿ ನೀಡುತ್ತಿದ್ದಾರೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries