;
ತಿರುವನಂತಪುರಂ: ರಾಜ್ಯದಲ್ಲಿ ಕಾಲೇಜುಗಳ ಪುನರಾರಂಭವನ್ನು ಮತ್ತೆ ಮುಂದೂಡಲಾಗಿದೆ. ಈ ತಿಂಗಳು 25 ರಿಂದ ಆರಂಭಿಸಲು ನಿರ್ಣಯಿಸಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಕಾಲೇಜು ಪುನರಾರಂಭ ವಿಸ್ತರಿಸುವ ನಿರ್ಧಾರ ಕ್ಯೆಗೊಳ್ಳಲಾಗಿದೆ.
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಈ ಬಗ್ಗೆ ಮಾಹಿತಿ ನೀಡಿದರು. ಈ ಮೊದಲು, ಇಂದು ಕಾಲೇಜುಗಳನ್ನು ತೆರೆಯಲು ನಿರ್ಧರಿಸಲಾಗಿತ್ತು. ಆದರೆ ಮಳೆಯಿಂದಾಗಿ ಬುಧವಾರಕ್ಕೆ ಮುಂದೂಡಲಾಯಿತು. ಬುಧವಾರ, ಗುರುವಾರ ಮತ್ತು ಶುಕ್ರವಾರ ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇದರಿಂದ ಅವಧಿಯನ್ನು ಮತ್ತೆ ವಿಸ್ತರಿಸಲಾಯಿತು.
ಭಾರೀ ಮಳೆಯಿಂದಾಗಿ ಅಣೆಕಟ್ಟುಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿರುವುದರಿಂದ ಪರಿಸ್ಥಿತಿಯನ್ನು ನಿರ್ಣಯಿಸಲು ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಇಂದು ತುರ್ತು ಸಭೆ ಕರೆಯಲಾಗಿತ್ತು. ಇದರಲ್ಲಿ, ಕಾಲೇಜುಗಳ ಆರಂಭವನ್ನು ಮುಂದೂಡಲು ನಿರ್ಧರಿಸಲಾಯಿತು.