ಗ್ವಾಲಿಯರ್: ತಾಂತ್ರಿಕ ದೋಷದಿಂದಾಗಿ ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆಯ (ಐಎಎಫ್) ವಿಮಾನವೊಂದು ಗುರುವಾರ ಮುಂಜಾನೆ ಪತನಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
'ಬೆಳಿಗ್ಗೆ ಕೇಂದ್ರ ವಲಯದಲ್ಲಿ ತರಬೇತಿ ನೀಡುವಾಗ ಐಎಎಫ್ ಮಿರಾಜ್ 2000 ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಪತನಗೊಂಡಿತು. ವಿಮಾನದಲ್ಲಿದ್ದ ಪೈಲಟ್ ಸುರಕ್ಷಿತವಾಗಿದ್ದಾರೆ. ಅಪಘಾತಕ್ಕೆ ಕಾರಣವನ್ನು ಪತ್ತೆ ಹಚ್ಚಲು ತನಿಖೆಗೆ ಆದೇಶಿಸಲಾಗಿದೆ' ಎಂದು ಐಎಎಫ್ ಟ್ವೀಟ್ ಮಾಡಿದೆ.
ಜಿಲ್ಲೆಯ ಮಂಕಬಾಗ್ ಗ್ರಾಮದಲ್ಲಿ ವಿಮಾನ ಪತನಗೊಳ್ಳುವ ಮೊದಲು ಪೈಲಟ್ ಸುರಕ್ಷಿತವಾಗಿ ಹೊರಗೆ ಜಿಗಿದಿದ್ದಾರೆ ಎಂದು
ಭಿಂಡ್ ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ಕುಮಾರ್ ಸಿಂಗ್ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.