ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 10,853 ಹೊಸ ಕೋವಿಡ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 526 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 10,853 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಅಂತೆಯೇ ಇದೇ ಅವಧಿಯಲ್ಲಿ 12,432 ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೇಶದಲ್ಲಿ ಕೋವಿಡ್ ನಿಂದ ಚೇತರಿಸಿಕೊಂಡವರ ಸಂಖ್ಯೆ 3,37,49, 900ಕ್ಕೆ ಏರಿಕೆಯಾಗಿದೆ.