ತಿರುವನಂತಪುರ: ಕೊರೊನಾ ನಿರ್ಬಂಧಗಳನ್ನು ಸಡಿಲಿಸುವುದರೊಂದಿಗೆ ರೈಲ್ವೆ ಪ್ಲಾಟ್‍ಫಾರ್ಮ್ ಟಿಕೆಟ್ ದರವನ್ನು ಕಡಿಮೆ ಮಾಡಲಾಗಿದೆ. ದಕ್ಷಿಣ ರೈಲ್ವೇಯ ತಿರುವನಂತಪುರಂ ವಿಭಾಗದ ವ್ಯಾಪ್ತಿಯ ಎಲ್ಲಾ ರೈಲು ನಿಲ್ದಾಣಗಳಲ್ಲಿ ಟಿಕೆಟ್ ದರವನ್ನು ಕಡಿಮೆ ಮಾಡಲಾಗಿದೆ. ಹೊಸ ದರಗಳು ಜಾರಿಗೆ ಬಂದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಿಕೆಟ್ ದರ 50 ರೂ.ನಿಂದ 10 ರೂ.ಗೆ ಇಳಿಕೆಯಾಗಿದೆ. ಹೆಚ್ಚಿನ ಕೊರೊನಾ ಪ್ರಕರಣಗಳ ಹಿನ್ನೆಲೆಯಲ್ಲಿ ರೈಲ್ವೆ ನಿಲ್ದಾಣಗಳಲ್ಲಿ ದಟ್ಟಣೆಯನ್ನು ಕಡಿಮೆ ಮಾಡುವ ಪ್ರಯತ್ನದ ಭಾಗವಾಗಿ ಟಿಕೆಟ್ ದರವನ್ನು ಹೆಚ್ಚಿಸಲಾಗಿತ್ತು. ಕಳೆದ ಅಕ್ಟೋಬರ್ ನಲ್ಲಿ 50 ರೂ.ಗೆ ಏರಿಸಲಾಗಿತ್ತು.
ಇದೇ ವೇಳೆ, ರಿಯಾಯಿತಿಗಳನ್ನು ಘೋಷಿಸಿದಾಗಲೂ ಪ್ರಯಾಣಿಕರು ಕೋವಿಡ್ ಪ್ರೋಟೋಕಾಲ್‍ಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದು ದಕ್ಷಿಣ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಯಾಣಿಕರು ಭೌತಿಕ ಅಂತರವನ್ನು ಕಾಯ್ದುಕೊಳ್ಳುವಲ್ಲಿ ಮತ್ತು ಮಾಸ್ಕ್ ಧರಿಸುವಲ್ಲಿ ನಿರ್ಲಕ್ಷ್ಯ ತೋರಬಾರದು ಎಂದು ಸೂಚಿಸಲಾಗಿದೆ.