ತಿರುವನಂತಪುರಂ: ರಾಜ್ಯದಲ್ಲಿ ದೀಪಾವಳಿ ಆಚರಣೆಯ ಅಂಗವಾಗಿ ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಬೇಕು ಎಂದು ಗೃಹ ಇಲಾಖೆ ತಿಳಿಸಿದೆ. ರಾತ್ರಿ 10 ಗಂಟೆಯ ನಂತರ ಪಟಾಕಿ ಸಿಡಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಈ ಸಂಬಂಧ ಗೃ ಇಲಾಖೆ ಆದೇಶ ಹೊರಡಿಸಿದೆ.
ಸುಪ್ರೀಂ ಕೋರ್ಟ್ ಆದೇಶದಂತೆ ಸಮಯ ನಿಗದಿ ಮಾಡಲಾಗಿದೆ.