ಜೈಪುರ: ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ಬಸ್ ಮತ್ತು ಟ್ರಕ್ ನಡುವೆ ಬುಧವಾರ ಡಿಕ್ಕಿಯಾದ ಪರಿಣಾಮ 12 ಮಂದಿ ಮೃತಪಟ್ಟಿದ್ದು, 22 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಜೈಪುರ: ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ಬಸ್ ಮತ್ತು ಟ್ರಕ್ ನಡುವೆ ಬುಧವಾರ ಡಿಕ್ಕಿಯಾದ ಪರಿಣಾಮ 12 ಮಂದಿ ಮೃತಪಟ್ಟಿದ್ದು, 22 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
'ಘಟನಾ ಸ್ಥಳದಲ್ಲಿ 10 ಮಂದಿಯ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ.
ಖಾಸಗಿ ಬಸ್ ಮತ್ತು ಟ್ಯಾಂಕರ್ ನಡುವಿನ ಅಪಘಾತದಲ್ಲಿ 12 ಮಂದಿ ಮೃತಪಟ್ಟಿದ್ದಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸಂತಾಪ ಸೂಚಿಸಿದ್ದಾರೆ. ಬಾರ್ಮರ್ ಜಿಲ್ಲಾಧಿಕಾರಿಯೊಟ್ಟಿಗೆ ಮಾತನಾಡಿದ್ದೇನೆ. ರಕ್ಷಣಾ ಕಾರ್ಯಾಚರಣೆ ಕುರಿತಾಗಿ ಅವರಿಗೆ ನಿರ್ದೇಶನ ನೀಡಲಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಎಲ್ಲ ವ್ಯವಸ್ಥೆ ಮಾಡಲಾಗುವುದು ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.